ಪುತ್ತೂರಿನ ಆರ್.ಟಿ.ಒ ಕೆ.ಆನಂದ ಗೌಡ ಅವರು ನಿವೃತ್ತರಾಗುತ್ತಿರುವ ನೆಲೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು.
Advertisement
ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗೌಡ,
ಶಿಕ್ಷಣ ಕೇವಲ ಮಾಹಿತಿ ಒದಗಿಸುವ ಮಾಧ್ಯಮವಾಗದೆ ಬದುಕಿನ ದಾರಿ ತೋರುವ, ಜೀವನಾನುಭವ ಕಟ್ಟಿಕೊಡುವ ವಿಚಾರವಾಗಬೇಕು. ಶಾಲೆಯಲ್ಲಿ ಓದುವ ಮಕ್ಕಳಿಗೆ ಸಂಸ್ಕಾರ ದೊರಕಬೇಕಾದದ್ದು ಬಹಳ ಮುಖ್ಯ. ಅಂಬಿಕಾ ಶಿಕ್ಷಣ ಸಂಸ್ಥೆಗಳು ಈ ನೆಲೆಯಲ್ಲಿ ಅತ್ಯುತ್ಕೃ ಷ್ಟವಾಗಿ ಕಾರ್ಯನಿರ್ವಹಿಸುತ್ತಿವೆ
Advertisement
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಜನಪರ ಕಾಳಜಿಯುಳ್ಳ ಅಧಿಕಾರಿಯೊಬ್ಬರನ್ನು ಗುರುತಿಸಬೇಕಾದದ್ದು ಜನರ ಕರ್ತವ್ಯ. ಆನಂದ ಗೌಡರು ಅಂತಹ ವಿಶಿಷ್ಟ ಅಧಿಕಾರಿ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.ಜನಾನುರಾಗಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆನಂದ ಗೌಡ ಅವರು ಮೇ 31ರಂದು ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement