ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ |

June 1, 2022
2:42 PM

ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ. ಅದರಲ್ಲೂ ನೈತಿಕ ಭ್ರಷ್ಟಾಚಾರ ಶೈಕ್ಷಣಿಕ ವಲಯವನ್ನು ತನ್ನ ಕಬಂಧಬಾಹುಗಳೊಳಗೆ ಸೆರೆಹಿಡಿಯಲಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ತೋರಬಹುದಾದ ಮಾದರಿ ಶಿಕ್ಷಕರು ಕಡಿಮೆಯಾಗುತ್ತಿದ್ದಾರೆ ಎಂಬುದು ಬೇಸರದ ವಿಚಾರ. ಆದರೆ ಈಗ ಇರುವ ಬೆರಳೆಣಿಕೆಯ ನೈತಿಕ ಮೌಲ್ಯದ ಶಿಕ್ಷಕರು  ಸಮಾಜಕ್ಕೆ, ವಿದ್ಯಾರ್ಥಿಗಳಿಗೆ ಬೆಳಕಾಗಬೇಕಿದೆ. ಅಂತಹ ಸಾಲಿನಲ್ಲಿ ರಾಮಚಂದ್ರ ಭಟ್ ಒಬ್ಬ ಆದರ್ಶ ಶಿಕ್ಷಕರೆನ್ನುವುದು ಹೆಮ್ಮೆಯ ಸಂಗತಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Advertisement

ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ರಾಮಚಂದ್ರ ಭಟ್ ಕೆ ಅವರನ್ನು ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ  ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ರಾಮಚಂದ್ರ ಭಟ್ಟರು ಕೇವಲ ವಿದ್ಯಾರ್ಥಿಗಳಿಗಲ್ಲದೆ ತನ್ನ ಜತೆಗಿನ ಇತರ ಉಪನ್ಯಾಸಕರಿಗೂ ಮಾದರಿಯಾಗಿ ಕಾರ್ಯನಿರ್ವಹಿಸಿದವರು. ಸ್ವಯಂಶಿಸ್ತನ್ನು ಅಳವಡಿಸಿಕೊಂಡು ವರ್ಚಸ್ಸು ಹೆಚ್ಚಿಸಿಕೊಂಡವರು. ಅವರ ಜೀವನಾನುಭವವನ್ನು ಇತರರಿಗೂ ಹಂಚಿ ಶೈಕ್ಷಣಿಕ ಶಿಸ್ತನ್ನು ವ್ಯವಸ್ಥಿತವಾಗಿ ಜಾರಿಗೊಳಿಸಿದವರು. ಶೈಕ್ಷಣಿಕ ಕ್ಷೇತ್ರದ ಅಪಸವ್ಯಗಳನ್ನು ಕಂಡು ಶಿಕ್ಷಕರಾಗುವುದೇ ಬೇಡ ಎಂಬ ಭಾವನೆ ವಿದ್ಯಾರ್ಥಿಗಳಲ್ಲಿ ನೆಲೆಯೂರುತ್ತಿರುವ ಸಂದರ್ಭದಲ್ಲಿ ಆಶಾಕಿರಣದಂತೆ ಗೋಚರಿಸುವ ವ್ಯಕ್ತಿಗಳಲ್ಲಿ ರಾಮಚಂದ್ರ ಭಟ್ಟರೂ ಒಬ್ಬರು ಎಂದು ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಮಾತನಾಡಿ ರಾಮಚಂದ್ರ ಭಟ್ಟರು ತುಂಬಾ ಸಮಯಪ್ರಜ್ಞೆ ಹೊಂದಿರುವಂತಂಹ ವ್ಯಕ್ತಿ. ನಾಲ್ಕು ದಶಕಗಳಿಗೂ ಮೀರಿದ ಉಪನ್ಯಾಸದ ಅನುಭವ ಹೊಂದಿದ್ದರೂ ಪ್ರತಿನಿತ್ಯ ಸಿದ್ಧತೆ ಮಾಡಿಕೊಂಡೇ ತರಗತಿಗೆ ತೆರಳುತ್ತಿದ್ದಂತಹವರು. ಸ್ವತಃ ಅನುಭವದ ಗಣಿಯಾಗಿದ್ದರೂ ಕಲಿಕೆಯ ಹಂಬಲ ಇರುವಂತಹವರು ಎಂದು ನುಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಮಚಂದ್ರ ಭಟ್ ವಿದ್ಯಾರ್ಥಿಗಳು ಸಂಸ್ಥೆಯ ನಿಜವಾದ ರಾಯಭಾರಿಗಳು. ಈಗಾಗಲೇ ಪ್ರಸಿದ್ಧಿ ಪಡೆದಿರುವ ಅಂಬಿಕಾ ಸಂಸ್ಥೆಯ ಹೆಸರನ್ನು ಮತ್ತಷ್ಟು ಪಸರಿಸುವ ಕಾರ್ಯವನ್ನು ವಿದ್ಯಾರ್ಥಿಗಳು, ಶಿಕ್ಷಕರು ನಡೆಸಬೇಕಿದೆ. ರಾಜ್ಯದ ಮೂಲೆಮೂಲೆಯಲ್ಲೂ ಅಂಬಿಕಾ ಸಂಸ್ಥೆಯ ಹೆಸರು ಅನುರಣಿಸುವಂತಾಗಬೇಕು. ತನ್ನ ಕರ್ತವ್ಯದ ದಿನದಲ್ಲಿ ಎಲ್ಲರನ್ನೂ ಒಳಗೊಂಡು ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಹಾಗೂ ಬಪ್ಪಳಿಗೆ ಸಂಸ್ಥೆಯ ನೂತನ ಪ್ರಾಂಶುಪಾಲೆ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಕ್ಯಾಂಪಸ್ ನಿದೇಶಕ ಭಾಸ್ಕರ ಶೆಟ್ಟಿ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

ಸಂಸ್ಥೆಯ ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group