ಆಧುನಿಕ ದಿನಗಳಲ್ಲಿ ಶಿಕ್ಷಕರೂ ಭ್ರಷ್ಟ ವ್ಯವಸ್ಥೆಯ ಭಾಗವಾಗುತ್ತಿರುವುದು ಆತಂಕಕಾರಿ. ಅದರಲ್ಲೂ ನೈತಿಕ ಭ್ರಷ್ಟಾಚಾರ ಶೈಕ್ಷಣಿಕ ವಲಯವನ್ನು ತನ್ನ ಕಬಂಧಬಾಹುಗಳೊಳಗೆ ಸೆರೆಹಿಡಿಯಲಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ತೋರಬಹುದಾದ ಮಾದರಿ ಶಿಕ್ಷಕರು ಕಡಿಮೆಯಾಗುತ್ತಿದ್ದಾರೆ ಎಂಬುದು ಬೇಸರದ ವಿಚಾರ. ಆದರೆ ಈಗ ಇರುವ ಬೆರಳೆಣಿಕೆಯ ನೈತಿಕ ಮೌಲ್ಯದ ಶಿಕ್ಷಕರು ಸಮಾಜಕ್ಕೆ, ವಿದ್ಯಾರ್ಥಿಗಳಿಗೆ ಬೆಳಕಾಗಬೇಕಿದೆ. ಅಂತಹ ಸಾಲಿನಲ್ಲಿ ರಾಮಚಂದ್ರ ಭಟ್ ಒಬ್ಬ ಆದರ್ಶ ಶಿಕ್ಷಕರೆನ್ನುವುದು ಹೆಮ್ಮೆಯ ಸಂಗತಿ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ರಾಮಚಂದ್ರ ಭಟ್ ಕೆ ಅವರನ್ನು ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಮಾತನಾಡಿ ರಾಮಚಂದ್ರ ಭಟ್ಟರು ತುಂಬಾ ಸಮಯಪ್ರಜ್ಞೆ ಹೊಂದಿರುವಂತಂಹ ವ್ಯಕ್ತಿ. ನಾಲ್ಕು ದಶಕಗಳಿಗೂ ಮೀರಿದ ಉಪನ್ಯಾಸದ ಅನುಭವ ಹೊಂದಿದ್ದರೂ ಪ್ರತಿನಿತ್ಯ ಸಿದ್ಧತೆ ಮಾಡಿಕೊಂಡೇ ತರಗತಿಗೆ ತೆರಳುತ್ತಿದ್ದಂತಹವರು. ಸ್ವತಃ ಅನುಭವದ ಗಣಿಯಾಗಿದ್ದರೂ ಕಲಿಕೆಯ ಹಂಬಲ ಇರುವಂತಹವರು ಎಂದು ನುಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಮಚಂದ್ರ ಭಟ್ ವಿದ್ಯಾರ್ಥಿಗಳು ಸಂಸ್ಥೆಯ ನಿಜವಾದ ರಾಯಭಾರಿಗಳು. ಈಗಾಗಲೇ ಪ್ರಸಿದ್ಧಿ ಪಡೆದಿರುವ ಅಂಬಿಕಾ ಸಂಸ್ಥೆಯ ಹೆಸರನ್ನು ಮತ್ತಷ್ಟು ಪಸರಿಸುವ ಕಾರ್ಯವನ್ನು ವಿದ್ಯಾರ್ಥಿಗಳು, ಶಿಕ್ಷಕರು ನಡೆಸಬೇಕಿದೆ. ರಾಜ್ಯದ ಮೂಲೆಮೂಲೆಯಲ್ಲೂ ಅಂಬಿಕಾ ಸಂಸ್ಥೆಯ ಹೆಸರು ಅನುರಣಿಸುವಂತಾಗಬೇಕು. ತನ್ನ ಕರ್ತವ್ಯದ ದಿನದಲ್ಲಿ ಎಲ್ಲರನ್ನೂ ಒಳಗೊಂಡು ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಹಾಗೂ ಬಪ್ಪಳಿಗೆ ಸಂಸ್ಥೆಯ ನೂತನ ಪ್ರಾಂಶುಪಾಲೆ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಕ್ಯಾಂಪಸ್ ನಿದೇಶಕ ಭಾಸ್ಕರ ಶೆಟ್ಟಿ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಂಸ್ಥೆಯ ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.