ಭಾರತೀಯತೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಮೈಗೂಡಿಸಿಕೊಳ್ಳಬೇಕು. ಭಾರತೀಯತೆ ಹೊರತುಪಡಿಸಿದ ವ್ಯಕ್ತಿ ಸತ್ತಂತೆ. ಹಾಗಾಗಿ ವಿದ್ಯಾರ್ಥಿ ಜೀವನದಿಂದಲೇ ರಾಷ್ಟ್ರ ಚಿಂತನೆಯನ್ನು ಒಡಮೂಡಿಸಿಕೊಳ್ಳಬೇಕು. ರಾಷ್ಟ್ರಭಕ್ತ ಯುವಪಡೆಯನ್ನು ರೂಪಿಸುವುದೇ ಅಂಬಿಕಾ ಶಿಕ್ಷಣ ಸಂಸ್ಥೆಗಳ ಪರಮಗುರಿಯಾಗಿದೆ ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ಪುತ್ತೂರಿನ ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳಿಗೆ ದಾಖಲಾತಿ ಹೊಂದಿದ ಪ್ರಥಮ ಪಿಯು ವಿದ್ಯಾರ್ಥಿಗಳ ಹೆತ್ತವರ ಸಮಾವೇಶವನ್ನು ಪುತ್ತೂರಿನ ಪುರಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಭಾರತೀಯತೆ ಬೆಳೆಸುವ ಕಾರಣದಿಂದಲೇ ಭಗವದ್ಗೀತೆ, ವಿಷ್ಣು ಸಹಸ್ರನಾಮ ಪಠಣ, ಯೋಗ, ನೈತಿಕ ಶಿಕ್ಷಣ ಅಂಬಿಕಾದಲ್ಲಿ ಶೈಕ್ಷಣಿಕ ಭಾಗವಾಗಿಯೇ ಸಾಗುತ್ತದೆ ಎಂದು ಅವರು ತಿಳಿಸಿದರು.
ಮಕ್ಕಳ ಸಾಧನೆಯಲ್ಲಿ ಹೆತ್ತವರ ಶ್ರಮ ಗಣನೀಯವಾದದ್ದು. ಇಂದು ಶಿಕ್ಷಣದ ನಂತರ ವಿದೇಶಕ್ಕೆ ತೆರಳಿ ಅಲ್ಲೇ ನೆಲೆಯಾಗುವ ಯುವ ಸಮೂಹವನ್ನು ಕಾಣುವಾಗ ಖೇದವೆನಿಸುತ್ತದೆ. ತಮ್ಮ ಏಳಿಗೆಗಾಗಿ ತಮ್ಮ ಬದುಕನ್ನು ತ್ಯಾಗ ಮಾಡಿದ ಹೆತ್ತವರನ್ನೇ ತ್ಯಜಿಸಿ ಹೋಗುವಂತಹ ಮನಃಸ್ಥಿತಿ ನಿರ್ಮಾಣ ಆಗಬೇಕೇ ಅಂತ ಯೋಚಿಸಬೇಕು. ಹಾಗಾಗಿ ನಮ್ಮ ದೇಶಕ್ಕಾಗಿ ನಮ್ಮ ಮಕ್ಕಳನ್ನು ಅರ್ಪಿಸುವುದೇ ಹೆತ್ತವರ ಗುರಿಯಾಗಬೇಕು ಎಂದು ಸುಬ್ರಹ್ಮಣ್ಯ ನಟ್ಟೋಜ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶೈಲೇಶ್ ಎಂ.ಎಲ್ ಮಾತನಾಡಿ ಶಿಕ್ಷಣ ಸಂಸ್ಥೆಗಳಲ್ಲಿ ಮಾರ್ಗದರ್ಶನ ದೊರಕುತ್ತದೆ. ಆದರೆ ದೊರೆತ ಶಿಕ್ಷಣ ಹೇಗೆ ಸಾಕಾರಗೊಳ್ಳುತ್ತಿದೆ ಎಂಬುದನ್ನು ಹೆತ್ತವರು ಗಮನಿಸುತ್ತಿರಬೇಕು. ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜತೆಯಾಗಿ ಸಾಗಿದಾಗ ಗುರಿ ಸಾಧನೆ ಸಾಧ್ಯವಾಗುತ್ತದೆ. ನಿಖರ ಗುರಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾದಾಗ ಉದ್ದೇಶ ಪ್ರಾಪ್ತಿಯಾಗಲು ಸಾಧ್ಯ ಎಂದರು.ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…