ಅಂಬಿಕಾ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆ | ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು : ಡಾ.ಶ್ರೀಧರ ಎಚ್.ಜಿ |

August 10, 2022
6:42 PM

ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು. ದೇಶಕ್ಕಾಗಿ ಸರ್ವಸ್ವವನ್ನೂಅರ್ಪಿಸುವ ಮನೋಭಾವ ಹೊಂದಿದ್ದ ಮಹನೀಯರು ನಮ್ಮ ನಡುವೆ ಆಗಿಹೋಗಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ದೇಶಕ್ಕೆ ದೇಶವೇ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ ಗಳಿಸಲು ನಮ್ಮ ಹಿಂದಿನವರು ಪಟ್ಟ ಶ್ರಮಏನೆಂಬುದನ್ನುಅರ್ಥ ಮಾಡಿಕೊಳ್ಳುವ ಕಾರ್ಯ ನಡೆಯಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ಹೇಳಿದರು.

Advertisement
ಅವರು ನಗರದ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಪಾರಂಪರಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಈ ಹಿಂದೆ ನಮ್ಮಕಣ್ಣ ಮುಂದೆ ಅನೇಕ ಮಾದರಿ ವ್ಯಕ್ತಿಗಳಿರುತ್ತಿದ್ದರು.ಆದರೆ ಈವತ್ತಿಗೂ ಅಂದಿನ ಮಹನೀಯರು ಮಾದರಿಗಳಾಗಿ ಉಳಿದಿದ್ದಾರೆ. ಹೊಸ ವ್ಯಕ್ತಿಗಳು ಆದರ್ಶ ಎನಿಸದಿರುವುದು ಆತಂಕಕಾರಿ ವಿಚಾರ. ನಾವು ಸ್ವಾತಂತ್ರ್ಯ ಗಳಿಸಿ ವರ್ಷಗಳಾಗುತ್ತಾ ಬಂದಂತೆ ನೈತಿಕವಾಗಿ ಅಧಃಪತನಕ್ಕಿಳಿಯುತ್ತಿದ್ದೇವೆ. ಈ ನೆಲೆಯಲ್ಲಿ ನಾವು ಗಂಭೀರವಾಗಿ ಆಲೋಚಿಸಬೇಕಿದೆ. ನನ್ನಂತೆ ನೀನಾಗು ಎಂದು ಸಲಹೆ ಕೊಡುವ ರೀತಿಯಲ್ಲಿ ನಾವು ಬದುಕಿತೋರಿಸಬೇಕು ಎಂದು ಕರೆ ನೀಡಿದರು.

ಪಾರಂಪರಿಕ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ನಮಗಿಂದು ಪಾಶ್ಚಿಮಾತ್ಯ ಚಿಂತನೆ, ಆಚರಣೆಗಳು ಆದರ್ಶವೆನಿಸುತ್ತಿರುವುದು ದುರಂತ. ಒಂದೆಡೆ ವಿದೇಶೀಯರು ನಮ್ಮ ಸಂಸ್ಕೃತಿ ಸಂಸ್ಕಾರಗಳೆಡೆಗೆ ಆಕರ್ಷಿತರಾಗುತ್ತಿದ್ದರೆ ನಮ್ಮವರೇ ದೂರಸರಿಯುತ್ತಿದ್ದಾರೆ. ನಮ್ಮ ದೇಶದ ಔನ್ನತ್ಯವನ್ನುಅರಿಯದೆ ನಮ್ಮತನದ ಬಗೆಗೆ ತಾತ್ಸಾರ ಧೋರಣೆ ಹೊಂದಿರುವ ವ್ಯಕ್ತಿಗಳೇ ದೇಶಕ್ಕಂಟಿದ ಶಾಪ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ನಾವು ನಮ್ಮತನದ ಹರಿಕಾರರಾಗಬೇಕು.ಒಳ್ಳೆಯ ವಿಚಾರಗಳನ್ನು ತಿಳಿದುಕೊಳ್ಳುವ ಹಾಗೂ ಅದಕ್ಕಾಗಿ ಹಂಬಲಿಸುವ ಮನಃಸ್ಥಿತಿ ಬೆಳೆಸಿಕೊಳ್ಳಬೇಕು.ನಮ್ಮ ದೇಸೀಯ ಪರಂಪರೆಯನ್ನು ಮುಂದುವರೆಸುವ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿಕಾಲೇಜು ವಾರ್ಷಿಕೋತ್ಸವ ಪ್ರಯುಕ್ತಆಯೋಜಿಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಾಯಿಶ್ವೇತಾ ಸ್ವಾಗತಿಸಿ, ಕಾರ್ಯದರ್ಶಿ ಅನಘಾ ವಂದಿಸಿದರು. ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್‍ ತೇಜಶಂಕರ ಸೋಮಯಾಜಿ ಕಾರ್ಯಕ್ರಮ ನಿರ್ವಹಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
April 21, 2025
7:37 AM
by: The Rural Mirror ಸುದ್ದಿಜಾಲ
ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!
April 21, 2025
7:13 AM
by: ದ ರೂರಲ್ ಮಿರರ್.ಕಾಂ
ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್
April 20, 2025
8:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ
April 20, 2025
5:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group