#ಅಂಬಿಕಾವಿದ್ಯಾಲಯ | ದೇಶದ ಬಗೆಗಿನ ಜ್ಞಾನ ಹಾಗೂ ಹೆಮ್ಮೆ ವಿದ್ಯಾರ್ಥಿಗಳಲ್ಲಿರಬೇಕು | ಸುಬ್ರಹ್ಮಣ್ಯ ನಟ್ಟೋಜ

August 19, 2022
9:20 AM

 ನಮ್ಮ ದೇಶದ ಬಗೆಗೆ ಅರಿವು, ಸಂಸ್ಕೃತಿಯ ಬಗೆಗೆ ಜ್ಞಾನ ಹಾಗೂ ತಮ್ಮ ತನಗಳ ಬಗೆಗೆ ಹೆಮ್ಮೆ ಹೊಂದಿರುವ ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ. ದೇಶದ ಬಗೆಗೆ ಅಪಾರ ಭಕ್ತಿ ಇರುವ ಯುವಸಮುದಾಯವನ್ನು ಸೃಷ್ಟಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಿಂದ ಆಗಬೇಕಿದೆ. ರಾಷ್ಟ್ರದ ಮುಂದೆ ಉಳಿದೆಲ್ಲವೂ ಗೌಣ ಎಂಬ ಭಾವನೆಯನ್ನು ಮಕ್ಕಳಲ್ಲಿ ಮೂಡಿಸಬೇಕಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Advertisement
Advertisement
Advertisement
Advertisement
ಅವರು ಪುತ್ತೂರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ನೂತನವಾಗಿ ಪದವಿ ತರಗತಿಗಳಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ  ಮಾತನಾಡಿದರು. ದೇಶದ ರಕ್ಷಣೆ ಮುಂದಿನ ಪೀಳಿಗೆಯ ಕೈಯಲ್ಲಿದೆ. ಯುವಸಮುದಾಯವನ್ನು ಸರಿಯಾದ ಹಾದಿಯಲ್ಲಿ ಕರೆದೊಯ್ದರೆ ಮಾತ್ರ ದೇಶವು ಬದಲಾವಣೆ ಹೊಂದುವುದಕ್ಕೆ ಸಾಧ್ಯ. ಪ್ರತಿಯೊಂದು ಶಾಲಾ ಕಾಲೇಜುಗಳಲ್ಲೂ ದೇಶದ ಬಗೆಗಿನ ಚಿಂತನೆಯನ್ನು ವಿದ್ಯಾರ್ಥಿಗಳಲ್ಲಿ ಒಡಮೂಡಿಸುವ ಕಾರ್ಯ ಆಗಬೇಕಿದೆ. ಹಾಗಾದಾಗ ಮಾತ್ರ ದೇಶದ ಭವಿಷ್ಯ ಮತ್ತಷ್ಟು ಸುಂದರವಾಗಿರಲು ಸಾಧ್ಯ ಎಂದರು.

Advertisement
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ, ಯಾವುದು ನಮಗೆ ತಿಳಿದಿರುವುದಿಲ್ಲವೋ ಅದನ್ನು ತಿಳಿಯುವುದೇ ಶಿಕ್ಷಣ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೂ ಶಿಕ್ಷಣದ ಅಗತ್ಯವಿದೆ. ನಮ್ಮ ತಪ್ಪುಗಳನ್ನು ನಾವು ತಿದ್ದಿಕೊಂಡಾಗ ಪಡೆದ ಶಿಕ್ಷಣಕ್ಕೆ ಅರ್ಥ ದೊರಕುವುದಕ್ಕೆ ಸಾಧ್ಯ ಎಂದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ ವಂದಿಸಿ, ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಮಖರ ಸೋಮಯಾಜಿ ಕಾರ್ಯಕ್ರಮ ನಿರ್ವಹಿಸಿದರು.

Advertisement
ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವನ್ನಿತ್ತು ಆಡಳಿತ ಮಂಡಳಿ ಹಾಗೂ ಗುರುವೃಂದದವರು ಸ್ವಾಗತಕೋರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ
ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ
January 31, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror