ದೇಶವನ್ನು ಹೀಯಾಳಿಸುವುದು ನೈತಿಕ ಅಧಃಪತನದ ಸಂಕೇತ : ಆದರ್ಶ ಗೋಖಲೆ

March 11, 2022
4:46 PM

ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ ದೇಶವನ್ನೇ ಹೀಯಾಳಿಸುವುದು ನೈತಿಕ ಅಧಃಪತನವನ್ನು ತೋರಿಸುತ್ತದೆ. ದೇಶದ ಹಿರಿಮೆಯನ್ನು ಅರ್ಥ ಮಾಡಿಕೊಂಡು, ದೇಶದ ಘನತೆ ಹೆಚ್ಚಿಸುವಂತಹ ನಡೆನುಡಿಗಳೊಂದಿಗೆ ಬದುಕಿ ತೋರಿಸಬೇಕು ಎಂದು ವಾಗ್ಮಿ ಆದರ್ಶ ಗೋಖಲೆ ಹೇಳಿದರು.

Advertisement
Advertisement
Advertisement

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ  ಮಾತನಾಡಿದರು.

Advertisement
ಯಶಸ್ಸು ಅನ್ನುವುದು ಆಮದು ಮಾಡಿಕೊಳ್ಳುವ ವಸ್ತುವಲ್ಲ. ನಮ್ಮೊಳಗೆ ಪೂರ್ವಸಿದ್ಧತೆ ಮಾಡಿಕೊಂಡು ಅಚಲವಾದ ನಂಬಿಕೆಯೊಂದಿಗೆ ಮುಂದುವರೆದಾಗ ಮಾತ್ರ ಯಶಸ್ಸು ನಮ್ಮದಾಗುವುದಕ್ಕೆ ಸಾಧ್ಯ. ಮನಸಿನ ಆವರಣದೊಳಗೆ ಸಾಧಿಸಬೇಕಾದದ್ದನ್ನು ಕಲ್ಪಿಸಿಕೊಂಡು ಅದರ ಸಾಕಾರಕ್ಕೆ ಬೇಕಾದ ಪೂರ್ವಭಾವಿ ಯೋಜನೆಗಳನ್ನು ಹಮ್ಮಿಕೊಳ್ಳಬೇಕು. ಆಗ ಎಲ್ಲವೂ ಸುಲಭ ಸಾಧ್ಯವೆನಿಸುತ್ತದೆ. ಅಂಕ,  ಶ್ರೇಣಿಗಳೆಲ್ಲ ಕೆಲವು ದಿನಗಳವರೆಗೆ ಮಾತ್ರ ಮುಖ್ಯವೆನಿಸುತ್ತದೆ. ಆದರೆ ಸಂಸ್ಕಾರ, ದೇಶಪ್ರೇಮಗಳು ಶಾಶ್ವತವಾಗಿ ಬೇಕಾಗುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಇಂದು ವಿದೇಶೀಯರು ನಮ್ಮ ದೇಸೀಯ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದಾರೆ. ನಮ್ಮ ದೇಶದಲ್ಲಿ, ನಮ್ಮ ಆಚಾರ ವಿಚಾರಗಳಲ್ಲಿ ಅಪಾರ ಮೌಲ್ಯಗಳಿವೆ ಎಂಬುದನ್ನು ಯುವಸಮೂಹ ಅರಿತುಕೊಳ್ಳಬೇಕಿದೆ. ದೇಶವನ್ನು ಪ್ರೀತಿಸುವ, ದೇಶವನ್ನು ಗೌರವಿಸುವ ಯುವ ಸಮುದಾಯವಾಗಿ ನಾವು ಬೆಳೆಯಬೇಕಿದೆ ಎಂದು ತಿಳಿಸಿದರು.

Advertisement
ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಸದಸ್ಯ ಸುರೇಶ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಪ್ರಾಂಶುಪಾಲ ಶಂಕರನಾರಾಯಣ ಭಟ್, ಉಪಪ್ರಾಂಶುಪಾಲ ರಾಮಚಂದ್ರ ಭಟ್, ಕ್ಯಾಂಪಸ್ ನಿರ್ದೇಶಕ ಭಾಸ್ಕರ ಶೆಟ್ಟಿ, ವಿದ್ಯಾರ್ಥಿ ನಾಯಕ ಮೋಹಿತ್ ಕೆ.ಎಸ್, ಉಪನ್ಯಾಸಕರು, ಉಪನ್ಯಾಸಕೇತರ ವೃಂದ, ವಸತಿನಿಲಯ ಪಾಲಕರು ಹಾಜರಿದ್ದರು. ವಿದ್ಯಾರ್ಥಿ ನಾಯಕಿ ಪ್ರೀತಲ್ ದಯಾನಂದ್ ಹಾಗೂ ವಿದ್ಯಾರ್ಥಿ ಕೌಶಿಕ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿ ಪ್ರಣಮ್ಯ ಬಿ ಪ್ರಾರ್ಥಿಸಿದರು. ಉಪನ್ಯಾಸಕ ತಿಲೋಶ್ ಕುಮಾರ್ ಸಿ ಸ್ವಾಗತಿಸಿದರು. ಉಪನ್ಯಾಸಕಿ ಶ್ವೇತಾ ಕೆ.ವಿ ವಂದಿಸಿದರು. ಉಪನ್ಯಾಸಕಿ ವಿನುತಾ ಕಾರ್ಯಕ್ರಮ ನಿರ್ವಹಿಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror