ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

November 13, 2022
9:51 AM

ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮಥ್ರ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು.

ಅವರು ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ  ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಎರಡು ವಿಧ ಇದೆ. ಒಂದು ಆಡಿ ಅನುಭವಿಸುವುದು ಇನ್ನೊಂದು ನೋಡಿ ಅನುಭವಿಸುವುದು. ಆಡಿ ಅನುಭವಿಸುವುದು ಕಷ್ಟದ ಕೆಲಸ. ಆದರೆ ಅದರಿಂದ ನಮ್ಮ ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ಅμÉ್ಟೀ ಅಲ್ಲದೆ ದೈಹಿಕ ಸಾಮಥ್ರ್ಯವೂ ಕೂಡ ಬೆಳವಣಿಗೆಯಾಗುತ್ತದೆ. ಹೀಗಾಗಿ ಆಡುವ ಮೂಲಕ ಬುದ್ಧಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕ್ರೀಡೆ ಶಿಕ್ಷಣಕ್ಕೆ ಅವಶ್ಯಕ, ಸಣ್ಣ ಮಗು ಯಾವಾಗ ತನ್ನನ್ನು ತಾನು ಆಟಕ್ಕೆ ಅಳವಡಿಸಿಕೊಳ್ಳುತ್ತದೋ ಆಗ ಮನೋವಿಕಾಸವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ, ಶಾಲಾ ನಾಯಕಿ ಸಂಸ್ಕೃತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಹಾಗು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ, ಸೂರ್ಯ, ಮನ್ವಿತ್ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಅಂಬಿಕಾ ವಿದ್ಯಾಲಯದ ಐರಾವತ, ಕಲ್ಪವೃಕ್ಷ, ಕಾಮಧೇನು, ಅಮೃತ ತಂಡದ ವಿದ್ಯಾರ್ಥಿಗಳು ಪಥಸಂಚನದಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ದೈಹಿಕ ಶಿಕ್ಷಕಿ ಸುಚಿತ್ರಾ ಸ್ವಾಗತಿಸಿ, ಪ್ರಾಂಶುಪಾಲೆ ಮಾಲತಿ.ಡಿ ಭಟ್ ವಂದಿಸಿದರು. ವಿದ್ಯಾರ್ಥಿಗಳಾದ ಅರುಂಧತಿ, ಅನಘ ವಿ. ಪಿ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror