ಸುದ್ದಿಗಳು

ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು.

Advertisement

ಅವರು ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡ ಮೂರು ದಿನಗಳ ಬೇಸಿಗೆ ಶಿಬಿರ – ‘ಪ್ರೇರಣಾ 2022’ ಅನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಅಜ್ಜನ ಮನೆಯೇ ಬೇಸಗೆ ಶಿಬಿರವಾಗಿತ್ತು. ರಜೆ ಸಿಕ್ಕಾಕ್ಷಣ ಅಲ್ಲಿಗೆ ತೆರಳಿ ತೋಟ ಗದ್ದೆಗಳಲ್ಲಿ ಓಡಾಡುವುದು, ಹಣ್ಣುಗಳನ್ನು ಕೊಯ್ದು ತಿನ್ನುವುದು, ಗಿಡಗಳಿಗೆ ನೀರುಣಿಸುವುದೇ ಮೊದಲಾದ ಚಟುವಟಿಕೆಗಳಿಂದ ನಿಸರ್ಗದ ಬಗೆಗೆ ಪರಿಕಲ್ಪನೆ ಬೆಳೆಯುತ್ತಿತ್ತು. ಅನೇಕಾನೇಕ ಪಾರಂಪರಿಕ ಜ್ಞಾನಗಳು ಅಂತಹ ಸಂದರ್ಭದಲ್ಲಿ ಒಡಮೂಡುತ್ತಿದ್ದವು. ಆದ್ದರಿಂದ ಇಂದಿನ ಮಕ್ಕಳೂ ಅಜ್ಜನಮನೆಗೆ ಹೋಗುವುದನ್ನು, ಅಲ್ಲಿ ಕಾಲ ಕಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರಲ್ಲದೆ ಪ್ರಕೃತಿಯನ್ನು ಉಳಿಸುವುದಕ್ಕೆ ಸಂಸ್ಕೃತಿ ಅಗತ್ಯ. ಆಧುನಿಕ ಯುವದಲ್ಲಿ ಪ್ರಕೃತಿಗೆ ಮಾರಕರಾಗಿ ವ್ಯವಹರಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ನೆಲ ಜಲದ ಅರಿವನ್ನು ಹೊಂದಿ ಮುಂದುವರಿಯಬೇಕು ಎಂದು ತಿಳಿಸಿದರು.

ಪ್ರಸ್ತಾವನೆಗೈದ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಕಲಿಕೆ ಅನ್ನುವುದು ತುಂಬಾ ವಿಶಾಲ ಅರ್ಥವನ್ನು ಹೊಂದಿದೆ. ಎಷ್ಟು ಹೊತ್ತು ಮಲಗಬೇಕು, ಯಾವಾಗ ಏಳಬೇಕು ಎಂಬುದೂ ಕಲಿಕೆಯ ಒಂದು ಭಾಗವೇ ಆಗಿದೆ. ಮಕ್ಕಳಿಗೆ ದೇಶದ ಹಿರಿಮೆ ಗರಿಮೆಗಳನ್ನು ತಿಳಿಸುವ, ಸಂಸ್ಕೃತಿಯನ್ನು ಪರಿಚಯಿಸುವ ನೆಲೆಯಲ್ಲಿ ‘ಪ್ರೇರಣಾ 2022’ ಆಯೋಜನೆಗೊಂಡಿದೆ. ಅನೇಕ ಮಂದಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ವಿನೂತನ ಪರಿಕಲ್ಪನೆಯನ್ನು ಮೂಡಿಸಲಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಮಕ್ಕಳು ಎಳವೆಯಿಂದಲೇ ಹೊಸ ಹೊಸ ವಿಚಾರಗಳನ್ನು ಅರಿತುಕೊಂಡು ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳು ಹೇಳಿದ್ದನ್ನು ಕೇವಲ ಕೇಳಿಸಿಕೊಳ್ಳುವುದಷ್ಟೇ ಅಲ್ಲದೆ ಬರೆದಿಟ್ಟು ಬದುಕಿನಲ್ಲಿ ಅಳವಡಿಸುವ ನೆಲೆಯಲ್ಲಿ ಕಾರ್ಯತತ್ಪರರಾಗಬೇಕು. ತನ್ಮೂಲಕ ಶಿಬಿರದ ಸದ್ಬಳಕೆ ಆಗಬೇಕು ಎಂದು ನುಡಿದರು. ವೇದಿಕೆಯಲ್ಲಿ ಶಿಬಿರದ ಸಂಯೋಜಕ ಸತೀಶ್ ಇರ್ದೆ ಉಪಸ್ಥಿತರಿದ್ದರು.

ಎಂಟನೆಯ ತರಗತಿ ವಿದ್ಯಾರ್ಥಿ ಆತ್ರೇಯ ಪ್ರಾರ್ಥಿಸಿ, ಏಳನೆಯ ತರಗತಿ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಆರನೆಯ ತರಗತಿ ವಿವಿಕ್ತ ವಂದಿಸಿ, ಪ್ರಿಯಾಂಶು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

56 minutes ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

4 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

4 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

22 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

1 day ago