ಪುತ್ತೂರು: ವಿದ್ಯೆ ಎನ್ನುವುದು ಸಂಸ್ಕಾರ, ದೇಶಪ್ರೇಮವನ್ನು ತುಂಬುವ ಮಾಧ್ಯಮವಾಗಬೇಕು. ಇಂದು ವೈದ್ಯಕೀಯ ಶಾಸ್ತ್ರ, ಇಂಜಿನಿಯರಿಂಗ್ ನಂತಹ ಶಿಕ್ಷಣ ಪಡೆದವರೇ ಬಾಂಬ್ ಸಿಡಿಸುವಂತಹ ಘಟನೆಗಳನ್ನು ಕಾಣುತ್ತಿದ್ದೇವೆ. ಹಾಗಾದರೆ ನಮ್ಮ ಶಿಕ್ಷಣ ವ್ಯವಸ್ಥೆ ಏನನ್ನು ಕಲಿಸುತ್ತಿದೆ ಎಂಬ ಆತಂಕ ಮೂಡುತ್ತಿದೆ. ಆದ್ದರಿಂದ ಅತ್ಯುತ್ತಮ ಗುಣಮಟ್ಟದ ನಾಗರಿಕರನ್ನು ತಯಾರಿಸುವ ಕಾರ್ಯವನ್ನು ಶಿಕ್ಷಣ ಮಾಡಬೇಕು ಎಂದು ಸಂಗೀತ ಗುರು ವಿದ್ವಾನ್ ಕಾಂಚನ ಈಶ್ವರ ಭಟ್ ಹೇಳಿದರು.
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನಗರದ ಬಪ್ಪಳಿಗೆಯಲ್ಲಿರುವ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ ಗಾಳಿಮನೆ ಮಾತನಾಡಿ ಶಿಕ್ಷಣ ವ್ಯಕ್ತಿತ್ವದ ರೂಪಿಸುವಿಕೆಯ ಭಾಗವಾಗಬೇಕು. ಸತ್ಪ್ರಜೆಗಳ ರೂಪಿಸುವಿಕೆಗೆ ನಾಂದಿಯಾಗಬೇಕು. ಭಾರತೀಯ ಪರಂಪರೆಯ ಶುದ್ಧ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಬೇಕಾದದ್ದು ಇಂದಿನ ತುರ್ತು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ನಮಗಿಂದು ದೇಶಭಕ್ತರು ಬೇಕಾಗಿದ್ದಾರೆ. ವಿದೇಶೀ ಸಂಸ್ಕೃತಿಯೊಳಗೆ ಮುಳುಗುತ್ತಿರುವ ನಮ್ಮ ದೇಶವನ್ನು ಸ್ವದೇಶೀ ಸಂಸ್ಕೃತಿಯ ಬಲದಿಂದ ಮೇಲೆಬ್ಬಿಸಬೇಕಿದೆ. ಒಂದು ರೀತಿಯಲ್ಲಿ ವಿದೇಶೀ ಪ್ರವಾಹದ ವಿರುದ್ಧ ಈಜಿ ಗೆಲುವು ಸಾಧಿಸಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿದ್ದು ಶುಭ ಹಾರೈಸಿದರು.
ಎಲ್ಲಾ ವಿದ್ಯಾರ್ಥಿಗಳಿಂದ ವಂದೇಮಾತರಂ ಪ್ರಾರ್ಥನೆ ನಡೆಯಿತು. ವಿದ್ಯಾರ್ಥಿ ಕಾರ್ತಿಕ್ ಕೆ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಾಯಿಶ್ವೇತ ವಂದಿಸಿ, ವೈಷ್ಣವಿ ಜೆ ರಾವ್ ಕಾರ್ಯಕ್ರಮ ನಿರ್ವಹಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…