ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಅನೇಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಂಬಿಕಾ ಹಾಸ್ಟೆಲ್ ಗಳಲ್ಲಿ ವಸತಿ ವ್ಯವಸ್ಥೆ ಹೊಂದಿದ್ದು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾದ ಅತ್ಯಂತ ಶುಚಿ ರುಚಿಯಾದ ಶುದ್ಧ ಸಸ್ಯಾಹಾರಿ ಊಟ ಉಪಹಾರಗಳ ವ್ಯವಸ್ಥೆಯನ್ನು ಅಂಬಿಕಾ ಹಾಸ್ಟೆಲ್ ನ ಅಡುಗೆಮನೆ ಒದಗಿಸಿಕೊಡುತ್ತಿದೆ. ಇತ್ತೀಚೆಗμÉ್ಟೀ ಅಂಬಿಕಾ ಹಾಸ್ಟೆಲ್ ಗೆ ಸಂಬಂಧಿಸಿದಂತೆ ನೂತನ ಹಾಗೂ ಅತ್ಯಾಧುನಿಕ ವ್ಯವಸ್ಥೆಯ ಅಡಿಗೆ ಮನೆಯನ್ನು ನಿರ್ಮಿಸಿದ್ದು, ಆಹಾರದ ಗುಣಮಟ್ಟದ ಬಗೆಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಇದೀಗ ಆಹಾರದ ಗುಣಮಟ್ಟವನ್ನು ಪ್ರಮಾಣೀಕರಿಸುವ ಸರ್ಕಾರದ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರವೂ ದೊರೆತಿರುವುದು ಗುಣಮಟ್ಟಕ್ಕೆ ಅಧಿಕೃತ ಮುದ್ರೆಯನ್ನೊದಗಿಸಿ ಕೊಟ್ಟಂತಾಗಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…