ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ | ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು : ಶಿಕ್ಷಣಾಧಿಕಾರಿ ಲೋಕೇಶ್ |

November 3, 2023
10:50 AM
ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ನಡೆಯಿತು.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಯಾಕೆಂದರೆ ಇಂದಿನ ಜೀವನ ಪದ್ಧತಿಗೆ ವಿಜ್ಞಾನ ಅತ್ಯಂತ ಅಗತ್ಯ ಮತ್ತು ಅನಿವಾರ್ಯ. ಸಾಧನೆ ಅನ್ನುವಂತದ್ದು ನಿರಂತರವಾಗಿ ಜಾರಿಯಲ್ಲಿರಬೇಕು ಎಂದು ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹೇಳಿದರು.

ಅವರು ಪುತ್ತೂರು  ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಶಿಕ್ಷಣ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮೂಲ ಕಾರಣ. ಹಾಗಾಗಿ ಶಿಕ್ಷಣ ಸಂಸ್ಥೆ ಮಕ್ಕಳಿಗೋಸ್ಕರ ಅಭಿವೃದ್ಧಿದಾಯಕ ಕಾರ್ಯಗಳನ್ನು ಮಾಡಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಬೇಕು ಎಂದರು.

ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಮತ್ತು ಅಮೃತಕಲಾ, ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ.ಡಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ದಿವ್ಯ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಸುಜಯ ಕಾರ್ಯಕ್ರಮ ನಿರೂಪಿಸಿದರು.

Taluk level science exhibition program was held at Puttur Ambika Vidyalaya
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror