ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಯಾಕೆಂದರೆ ಇಂದಿನ ಜೀವನ ಪದ್ಧತಿಗೆ ವಿಜ್ಞಾನ ಅತ್ಯಂತ ಅಗತ್ಯ ಮತ್ತು ಅನಿವಾರ್ಯ. ಸಾಧನೆ ಅನ್ನುವಂತದ್ದು ನಿರಂತರವಾಗಿ ಜಾರಿಯಲ್ಲಿರಬೇಕು ಎಂದು ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹೇಳಿದರು.
ಅವರು ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಶಿಕ್ಷಣ ವ್ಯವಸ್ಥೆ ದೇಶದ ಅಭಿವೃದ್ಧಿಗೆ ಮೂಲ ಕಾರಣ. ಹಾಗಾಗಿ ಶಿಕ್ಷಣ ಸಂಸ್ಥೆ ಮಕ್ಕಳಿಗೋಸ್ಕರ ಅಭಿವೃದ್ಧಿದಾಯಕ ಕಾರ್ಯಗಳನ್ನು ಮಾಡಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಬೇಕು ಎಂದರು.
ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಮತ್ತು ಅಮೃತಕಲಾ, ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಾಂಶುಪಾಲೆ ಮಾಲತಿ.ಡಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ದಿವ್ಯ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಸುಜಯ ಕಾರ್ಯಕ್ರಮ ನಿರೂಪಿಸಿದರು.
Taluk level science exhibition program was held at Puttur Ambika Vidyalaya ಕರ್ನಾಟಕದಲ್ಲಿ ಹವಾಮಾನ ಬದಲಾವಣೆಯ ಸೂಚನೆಗಳಿದ್ದು, ನವೆಂಬರ್ 24ರಿಂದ ಮಲೆನಾಡಿನಲ್ಲಿ ಹಾಗೂ ನವೆಂಬರ್ 25ರಿಂದ…
ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚಾಮಡ್ಕ ಜಲಪಾತ ಪ್ರದೇಶದಲ್ಲಿ ‘ಸ್ವಚ್ಛ ಗ್ರಾಮ ಸುಂದರ, ನಮ್ಮ…
ನವೆಂಬರ್ ಮೊದಲ ವಾರದಲ್ಲಿ ಕೆ.ಜಿ.ಗೆ ₹300 ತಲುಪಿದ್ದ ಆರ್‌ಎಸ್‌ಎಸ್-4 ರಬ್ಬರ್ ಬೆಲೆ ಮೂರು…
ಸುಳ್ಯ ಸಮೀಪದ ಬೊಕ್ಕಾಡಿಯಲ್ಲಿ ನವೆಂಬರ್ 22ರಂದು ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ…
ಸುಳ್ಯ ತಾಲೂಕಿನ ಅಮರಮುಡ್ನೂರಿನಲ್ಲಿ ಆರಂಭವಾದ ಸ್ವಚ್ಛತಾ ಅಭಿಯಾನ ಇದೀಗ ಪಕ್ಕದ ಕಲ್ಮಡ್ಕ ಗ್ರಾಮಕ್ಕೂ…
ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 22ರವರೆಗೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…