ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ

December 28, 2022
9:49 PM

ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

Advertisement
Advertisement
Advertisement

ವಿಶೇಷ ವಿಮಾನದ ಮೂಲಕ ಡಿ. 29ರಂದು ಹೊಸದಿಲ್ಲಿಯಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ರಾತ್ರಿ 10 ಗಂಟೆಗೆ ಯಲಹಂಕದ ವಾಯುನೆಲೆಗೆ ಆಗಮಿಸಿ, ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Advertisement

ಡಿ. 30ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15ರ ವರೆಗೆ ಹೊಟೇಲ್‍ನಲ್ಲಿ ಉಪಹಾರದೊಂದಿಗೆ ರಾಜ್ಯ ಬಿಜೆಪಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿರುವ ಅವರು, ಮಧ್ಯಾಹ್ನ 1.35ಕ್ಕೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಮಂಡ್ಯ ಸರಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ.

ಅನಂತರ, ಮಧ್ಯಾಹ್ನ 3.30ಕ್ಕೆ ಗೆಜ್ಜಲಗೆರೆಯಲ್ಲಿ ಸ್ಥಾಪಿಸಿರುವ ಮೆಗಾ ಡೈರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಿ, ಅಂದು ರಾತ್ರಿ 8 ರಿಂದ 9.30ರವರೆಗೆ ಬಿಜೆಪಿ ಪಕ್ಷದ ನಾಯಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror