ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ಡಿ. 29ರಂದು ಹೊಸದಿಲ್ಲಿಯಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ರಾತ್ರಿ 10 ಗಂಟೆಗೆ ಯಲಹಂಕದ ವಾಯುನೆಲೆಗೆ ಆಗಮಿಸಿ, ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ. 30ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15ರ ವರೆಗೆ ಹೊಟೇಲ್‍ನಲ್ಲಿ ಉಪಹಾರದೊಂದಿಗೆ ರಾಜ್ಯ ಬಿಜೆಪಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿರುವ ಅವರು, ಮಧ್ಯಾಹ್ನ 1.35ಕ್ಕೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಮಂಡ್ಯ ಸರಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ.
ಅನಂತರ, ಮಧ್ಯಾಹ್ನ 3.30ಕ್ಕೆ ಗೆಜ್ಜಲಗೆರೆಯಲ್ಲಿ ಸ್ಥಾಪಿಸಿರುವ ಮೆಗಾ ಡೈರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಿ, ಅಂದು ರಾತ್ರಿ 8 ರಿಂದ 9.30ರವರೆಗೆ ಬಿಜೆಪಿ ಪಕ್ಷದ ನಾಯಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…