ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಇದೀಗ ಅಮಿತ್ ಶಾ ಆಗಮನದ ಜೊತೆಗೆ ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಈ ನಡುವೆಯೇ ಸಚಿವ ಸಂಪುಟ ವಿಸ್ತರಣೆ, ಸಚಿವರ ಕೈ ಬಿಡುವ ಉದ್ದೇಶ, ನೂತನ ನಾಯಕತ್ವದ ಬಗ್ಗೆಯೂ ಕುತೂಹಲ ಮೂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡೆಗೂ ನಿಗಾ ಇದ್ದು. ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ಈ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಮುಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ಹಾಗೂ ವಂಶಾಡಳಿತ ರಾಜಕಾರಣದ ಕುರಿತಂತೆ ನೀಡಿದ್ದ ಹೇಳಿಕೆಯೊಂದು ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ, ಮುಂಬರುವ ಚುನಾವಣೆಗೆ ಸಂಘಟನಾತ್ಮಕ ಸಿದ್ಧತೆ ಸೇರಿದಂತೆ ಬಿಜೆಪಿಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿರುವಾಗಲೇ ಸಂತೋಷ್ ಅವರ ಹೇಳಿಕೆಗೆ ಪುಷ್ಟಿ ನೀಡಿತ್ತು.
ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆಯೂ ಬಹುದಿನಗಳಿಂದ ಇದೆ. ಸದ್ಯ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಪ್ರಭಾವ ಸಾಕಷ್ಟಿಲ್ಲ ಎನ್ನುವ ಅಭಿಪ್ರಾಯ ಇದ್ದು. ಇದೀಗ ಈ ಸ್ಥಾನಕ್ಕೆ ಹಿಂದೂವಾದಿಯನ್ನೇ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ವರಿಷ್ಟರು ಚಿಂತನೆ ನಡೆಸಿದ್ದರು ಎನ್ನುವುದು ಮಾಧ್ಯಮಗಳ ವರದಿ. ಇದರ ಜೊತೆಗೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪ್ರಮುಖ ಹುದ್ದೆ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವೇಳೆಯೂ ಕೆಲವು ಸಚಿವರ ಕೈಬಿಡುವುದು ಹಾಗೂ ಹೊಸಬರಿಗೆ ಅವಕಾಶ ನೀಡುವ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ. ಭ್ರಷ್ಟಾಚಾರ, ಬೆಂಬಲಿಗರಿಗೆ ಮಣೆ, ಸ್ವಜನ ಪಕ್ಷಪಾತ ಸೇರಿದಂತೆ ಇತರ ಸಂಗತಿಗಳ ಬಗ್ಗೆ ವರಿಷ್ಠರು ಗುಪ್ತವಾಗಿ ಮಾಹಿತಿ ಸಂಗ್ರಹಿಸಿದ್ದು ಇದೆಲ್ಲಾ ಈಗ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂದಿನ ಚುನಾವಣೆಯನ್ನು ಗುರಿಯಾಗಿಸಿ ಈ ಬದಲಾವಣೆಗಳು ಆರಂಭವಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?