ಪುಣ್ಯಕೋಟಿ ನಗರ‌ | ಅಮೃತಧಾರಾ ಗೋಶಾಲೆಯಲ್ಲಿ ಗೋಸೇವಾ ಮಾಸಾಚರಣೆ ಸಂಪನ್ನ

February 15, 2023
2:37 PM

ರಾಘವೇಶ್ವರ ಭಾರತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14 ರಿಂದ ಆರಂಭಗೊಂಡ ಒಂದು ತಿಂಗಳ ಗೋಸೇವಾ ಮಾಸಾಚರಣೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ‌ ಹಾಗೂ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ವೈಭವ ಹಾಗೂ ವಿಭಿನ್ನತೆಯ ಮೂಲಕ ನಡೆದು ಸೋಮವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.

Advertisement
Advertisement

ಗೋಸೇವಾ ಮಾಸಾಚರಣೆ ಉದ್ಘಾಟನೆಯನ್ನು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ‌ ಉಪಸ್ಥಿತಿಯೊಂದಿಗೆ ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಉದ್ಘಾಟಿಸಿ‌ದರು.

Advertisement

ಗೋಸೇವಾ ಕಾರ್ಯಕ್ರಮದಲ್ಲಿ ಮುಡಿಪು ಭಾಗದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆಯು ನಿತ್ಯ ನಿರಂತರವಾಗಿ ನಡೆಯಿತು. ಪ್ರತಿನಿತ್ಯ ಸಂಜೆ‌ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ನಿರಂತರ ಭಜನಾ ಸಂಧ್ಯಾ ಭಜನೆಯು ನಡೆಯಿತು.

ಸಂಚಾಲಕ ಟಿ.ಜಿ. ರಾಜಾರಾಮ್ ಭಟ್ ಮಾತನಾಡಿ,‌ ಕೈರಂಗಳ ಪುಣ್ಯಕೋಟಿನಗರದ ಗೋಶಾಲೆಯಲ್ಲಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತಿಂಗಳ ಕಾಲ ನಡೆದ ಗೋಸೇವಾ ಮಾಸಾಚರಣೆಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಎಲ್ಲರ ಪರಿಶ್ರಮ, ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.

Advertisement

ಕಣಂತೂರು ಅರಸು ತೋಡಕುಕ್ಕಿನ್ನಾರ್ ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ನಾರ್ಯಗುತ್ತು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಹಿರಿಯರಾದ ಶಂಕರಭಟ್ ಕೊಣಾಜೆ, ಜಯರಾಮ ಶೆಟ್ಟಿ ಕಂಬಳಪದವು, ರವಿ ಮಂಜನಾಡಿ, ಕಿರಣ್ ದಾಸ್ ಹೂವಿನ ಕೊಪ್ಪಳ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು. ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಪಾದಲ್ಪಾಡಿ ವಂದಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror