ರಾಜ್ಯದಲ್ಲಿ ಈ ಬಾರಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲ ದಿನಗಳ ಹಿಂದೆ ಕೆಲ ಮಳೆ(Rain) ಕೊಂಚ ಮಳೆಯಾಗಿದ್ದರೂ, ರೈತರು(Farmer) ನೀರಿಲ್ಲದೆ(Water) ಬೆಳೆ(Crop) ಬೆಳೆಯಲಾಗದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ(State govt) ಬರ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರವನ್ನು(Central Govt) ಕೇಳಿಕೊಂಡಿತ್ತು. ಆದರೆ ಕೇಂದ್ರ ಬರ ಪರಿಹಾರ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿತ್ತು. ಇದೀಗ ಬರ ಪರಿಹಾರ ಬಿಡುಗಡೆ (Drought Relief Funds) ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರೀಂಕೋರ್ಟ್‌ಗೆ (Supreme Court) ಹೇಳಿದ್ದಾರೆ. ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ (Election Commission) ಜೊತೆಗೆ ಈ ಬಗ್ಗೆ ಚರ್ಚಿಸಿದ ಬರ ಪರಿಹಾರ ಬಿಡುಗಡೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕೇಂದ್ರ ಸರ್ಕಾರ ಭರವಸೆ ಬೆನ್ನಲೆ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದರು. ಅರ್ಜಿ ವಿಚಾರಣೆಯನ್ನು ಕೋರ್ಟ್ ಏ.29ಕ್ಕೆ ಮುಂದೂಡಿದೆ. ವಿಚಾರಣೆ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದೆವು. ಇಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ಈ ವಾರದಲ್ಲಿ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದೆ ರಾಜ್ಯ ಸರ್ಕಾರ ಕೋರ್ಟ್ ಮೂಲಕ ಪರಿಹಾರ ಪಡೆಯುವಂತಾಗಿದೆ. ಇದು ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಸಂದ ಜಯ ಎಂದರು.
18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಕೇಳಿದೆ 4663 ಕೋಟಿ ಹಣವನ್ನಾದರೂ ಮೊದಲು ಬಿಡುಗಡೆ ಮಾಡಲಿ ಇದರಿಂದ ರೈತರಿಗೆ ಸಹಾಯವಾಗಲಿದೆ, ರೈತರಿಗೆ ಅನಿವಾರ್ಯತೆ ಇದ್ದಾಗ ಪರಿಹಾರ ನೀಡಬೇಕು ಮುಗಿದ ಮೇಲಲ್ಲ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮೊದಲ ಹಂತದ ವೇಳೆ ಪರಿಹಾರ ಬಿಡುಗಡೆ ರಾಜಕೀಯ ತಿರುವು ಪಡೆಯುವ ಸಾಧ್ಯತೆ ಬಗ್ಗೆ ಮಾತನಾಡಿದ ಅವರು, ನಮ್ಮ ಹೋರಾಟದಿಂದ ನ್ಯಾಯ ಸಿಗುವ ಹೊಸ್ತಿಲಲ್ಲಿ ಬಂದು ನಿಂತಿದ್ದೇವೆ, ಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ ನಮ್ಮಗೆ ರಾಜ್ಯದ ರೈತರ ಹಿತ ಮುಖ್ಯ, ಇದು ರಾಜಕೀಯ ಮಾಡುವ ವಿಷಯ ಅಲ್ಲ. ಕೇಂದ್ರ ಸರ್ಕಾರ ಈಗಾಗಲೇ ನಮ್ಮಗೆ ಅನ್ಯಾಯ ಮಾಡಿದೆ, ಕೋರ್ಟ್ ಮೂಲಕ ನಾವು ಪರಿಹಾರ ಪಡೆಯುವ ಸನ್ನಿವೇಶ ಬಂದಿದೆ ಎಂದರು.
ನಮ್ಮನ್ನು ಟೀಕೆ ಮಾಡಲು ಕೇಂದ್ರ ಸರ್ಕಾರದ ಬಳಿ ಒಂದು ಅಂಶವೂ ಇಲ್ಲ, ತಡ ಆಗಿರುವುದು ಕೇಂದ್ರ ಸರ್ಕಾರದ ಕಡೆಯಿಂದ ಮಾತ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎನ್ನುವುದಕ್ಕೆ ಇದೆ ಸಾಕ್ಷಿ, ಇಂತಹ ಪ್ರಕರಣದಲ್ಲಿ ಯಾಕೆ ರಾಜ್ಯಗಳು ಯಾಕೆ ಕೋರ್ಟ್‌ಗೆ ಬರಬೇಕು ಎಂದು ಪೀಠ ಕೇಳಿದೆ? ಇದಕ್ಕಿಂತ ಹೆಚ್ಚು ಏನ್ ಹೇಳಬೇಕು ಎಂದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…