Advertisement
MIRROR FOCUS

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

Share

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿ ಈಗಲೂ ಚಲಾವಣೆಯಲ್ಲಿರುವ ಹಾಗೂ ಬಹು ಬೇಡಿಕೆಯ ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್  ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಈಗಲೂ ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು. ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

3 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

13 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

21 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

1 day ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

3 days ago