ವೈದ್ಯಕೀಯ ವಿದ್ಯಾರ್ಥಿಗಳು ಜೀನ್ಸ್ ಹಾಗೂ ಟೀ ಶರ್ಟ್ ಧರಿಸುವಂತಿಲ್ಲ ಎಂದು ಯಾವುದೇ ಆದೇಶ ಮಾಡಿಲ್ಲ ಎಂದು ಆಂಧ್ರಪ್ರದೇಶದ ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸ್ಪಷ್ಟಪಡಿಸಿದೆ.
ಕೆಲವು ವಿದ್ಯಾರ್ಥಿಗಳು, ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ನಿಗದಿತ ಡ್ರೆಸ್‌ಕೋಡ್ ಅನುಸರಿಸದ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಪಿಜಿ ವೈದ್ಯಕೀಯ ವಿದ್ಯಾರ್ಥಿಗಳು ಶುದ್ಧವಾದ ಬಟ್ಟೆ ಧರಿಸಬೇಕು, ಕೂದಲು ಬಿಡುವಂತಿಲ್ಲ. ಪುರುಷರು ಕ್ಲೀನ್ ಶೇವ್ ಮಾಡಬೇಕು ಎಂದು ಸೂಚಿಸಲಾಗಿದೆ. ಕಡ್ಡಾಯವಾಗಿ ಸ್ಟೆಥಸ್ಕೋಪ್ ಹಾಗೂ ಏಪ್ರಾನ್ ಧರಿಸಿರಬೇಕು ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಆಂಧ್ರ ಸರ್ಕಾರ ಶನಿವಾರ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಂಧ್ರ ಸರ್ಕಾರದ ಪ್ಯಾಕ್ಟ್ ಚೆಕ್ ಟ್ವಿಟ್ಟರ್ ಖಾತೆಯ ಮೂಲಕ ತಿಳಿಸಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವೈದ್ಯಕೀಯ ವಿದ್ಯಾರ್ಥಿಗಳು ಜೀನ್ಸ್ ಟೀ ಶರ್ಟ್ ನಿಷೇಧ | ಯಾವುದೇ ಆದೇಶ ಮಾಡಿಲ್ಲ ಎಂದು ಆಂಧ್ರ ಸರ್ಕಾರ |"