ವೈದ್ಯಕೀಯ ವಿದ್ಯಾರ್ಥಿಗಳು ಜೀನ್ಸ್ ಹಾಗೂ ಟೀ ಶರ್ಟ್ ಧರಿಸುವಂತಿಲ್ಲ ಎಂದು ಯಾವುದೇ ಆದೇಶ ಮಾಡಿಲ್ಲ ಎಂದು ಆಂಧ್ರಪ್ರದೇಶದ ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸ್ಪಷ್ಟಪಡಿಸಿದೆ.
ಕೆಲವು ವಿದ್ಯಾರ್ಥಿಗಳು, ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿ ನಿಗದಿತ ಡ್ರೆಸ್‌ಕೋಡ್ ಅನುಸರಿಸದ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಪಿಜಿ ವೈದ್ಯಕೀಯ ವಿದ್ಯಾರ್ಥಿಗಳು ಶುದ್ಧವಾದ ಬಟ್ಟೆ ಧರಿಸಬೇಕು, ಕೂದಲು ಬಿಡುವಂತಿಲ್ಲ. ಪುರುಷರು ಕ್ಲೀನ್ ಶೇವ್ ಮಾಡಬೇಕು ಎಂದು ಸೂಚಿಸಲಾಗಿದೆ. ಕಡ್ಡಾಯವಾಗಿ ಸ್ಟೆಥಸ್ಕೋಪ್ ಹಾಗೂ ಏಪ್ರಾನ್ ಧರಿಸಿರಬೇಕು ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಆಂಧ್ರ ಸರ್ಕಾರ ಶನಿವಾರ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಂಧ್ರ ಸರ್ಕಾರದ ಪ್ಯಾಕ್ಟ್ ಚೆಕ್ ಟ್ವಿಟ್ಟರ್ ಖಾತೆಯ ಮೂಲಕ ತಿಳಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…