ನಮ್ಮ ರಾಜ್ಯದ ಹೆಮ್ಮೆಯ ವಿವಿಧ ಪ್ರಾಣಿಗಳ ಆವಸ್ಥಾನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಇಲ್ಲಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅಭಯಾರಣ್ಯಕ್ಕೆ ಬಂದ ಪ್ರವಾಸಿಗರಿಗೆ ಸಫಾರಿಗೆ ತೆರಳಿದರೆನೇ ಅದರ ಮಜಾ. ಅಲ್ಲಲ್ಲಿ ವಿವಿಧ ಪ್ರಾಣಿ ಪಕ್ಷಿಗಳು ಅಗಾಗ ದರ್ಶನ ನೀಡುತ್ತವೆ. ಈ ವೇಳೆ ಕೆಲವೊಮ್ಮೆ ಕೆಲ ಪ್ರಾಣಿಗಳು ದಾಳಿ ಮಾಡುವುದು ಇದೆ. ಅಂತಹವರಿಗೆ ಸರ್ಕಾರ ವಿಮೆ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ.
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳಿರುವ ತಾಣ ಬಂಡೀಪುರ. ಹುಲಿಗಳ ಜೊತೆಯಲ್ಲಿ ಆನೆ ಕರಡಿ, ಚಿರತೆ ಕಾಡೆಮ್ಮೆ, ಜಿಂಕೆ ಮೊದಲಾದ ಪ್ರಾಣಿಗಳ ಆವಾಸಸ್ಥಾನವಾಗಿದೆ. ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ. ಈಗಾಗಲೇ ಕಳ್ಳಬೇಟೆ ತಡೆ ಶಿಬಿರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಕಾಡು ಪ್ರಾಣಿಗಳ ದಾಳಿಗೆ ಸಾವನ್ನಪ್ಪಿದರೆ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ರೂಪಾಯಿ ವಿಮೆ ಪರಿಹಾರವಾಗಿ ನೀಡಲಾಗುತ್ತದೆ.
ಪ್ರವಾಸಿಗರಿಗೆ ವಿಮೆ ಸೌಲಭ್ಯ: ಇದೀಗ ವಿಮೆಯನ್ನು ಪ್ರವಾಸಿಗರಿಗೂ ವಿಸ್ತರಿಸಲು ಅರಣ್ಯ ಇಲಾಖೆ ಮುಂದಾಗಿದೆ. ಸಫಾರಿ ಶುಲ್ಕದ ಜೊತೆಗೆ 5 ರೂಪಾಯಿ ಹೆಚ್ಚುವರಿ ಪಡೆದು ವಿಮೆ ಸೌಲಭ್ಯ ನೀಡಲು ಚಿಂತನೆಯನ್ನು ಇಲಾಖೆ ಹೊಂದಿದೆ. ಈಗಾಗಲೇ ಅರಣ್ಯ ಇಲಾಖೆ ವಿಮಾ ಕಂಪನಿಗಳೊಂದಿಗೆ ಮಾತುಕತೆ ನಡೆಸಿದೆ. ಕೆಲವೇ ದಿನಗಳಲ್ಲಿ ವಿಮೆ ಯೋಜನೆ ಜಾರಿಯಾಗಲಿದೆ ಎಂದು ತಿಳಿದು ಬಂದಿದೆ.
ಬಂಡೀಪುರದಲ್ಲಿ 150 ಹುಲಿಗಳು: ಕರ್ನಾಟಕದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶ 150 ಹುಲಿಗಳೊಂದಿಗೆ ದೇಶದಲ್ಲಿ ಎರಡನೇ ಹಾಗೂ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ. ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ 141 ಹುಲಿಗಳೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ. 022ರ ಹುಲಿಗಣತಿ ಪ್ರಕಾರ ಬಂಡೀಪುರದಲ್ಲಿ 150, ನಾಗರಹೊಳೆಯಲ್ಲಿ141, ಭದ್ರ ಹುಲಿಸಂರಕ್ಷಿತ ಪ್ರದೇಶದಲ್ಲಿ 28, ಬಿ.ಆರ್.ಟಿ.ಯಲ್ಲಿ 37, ಕಾಳಿ ಹುಲಿಸಂರಕ್ಷಿತ ಪ್ರದೇಶದಲ್ಲಿ 17 ಹುಲಿಗಳು ಪತ್ತೆಯಾಗಿವೆ.
Source:Online Press Journal
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…