Advertisement
ಸುದ್ದಿಗಳು

ಪಶು ಸಂಗೋಪನೆ ವಲಯಕ್ಕೆ ಉತ್ತೇಜನ : ಹೈನುಗಾರರ ಆದಾಯ ಹೆಚ್ಚಿಸಲು ಕೇಂದ್ರದ ಕ್ರಮ

Share

ರಾಜ್ಯಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಪಶು ಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್, ಕೇಂದ್ರ ಸರ್ಕಾರ ಪಶು ಸಂಗೋಪನೆ ವಲಯಕ್ಕೆ ಉತ್ತೇಜನ ನೀಡುತ್ತಿದ್ದು, ಹಾಲು ಉತ್ಪಾದನೆಯ ಮೂಲಕ ರೈತರ ಆರ್ಥಿಕ ಬಲವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಪಶು ಸಂಗೋಪನೆ ವಲಯ ಬಹುತೇಕ ಅಸಂಘಟಿತವಾಗಿದ್ದು, ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಇದನ್ನು ಸಂಘಟಿತ ವಲಯಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ. ಪಶು ಸಂಗೋಪನೆಯಲ್ಲಿ ತೊಡಗಿರುವ ರೈತಾಪಿ ವರ್ಗಕ್ಕೆ ಹೆಚ್ಚಿನ ಲಾಭ ದೊರಕುವಂತೆ ಮಾಡುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದೇ ವೇಳೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾತನಾಡಿ, ದೇಶದಲ್ಲಿ ನಕ್ಸಲ್ ಚಟುವಟಿಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನೀತಿ ರೂಪಿಸಿದ್ದು, ಆರು ಪ್ರಮುಖ ಕಾರ್ಯಕ್ರಮಗಳ ಮೂಲಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

2026ರ ಮಾರ್ಚ್ ಅಂತ್ಯದೊಳಗೆ ನಕ್ಸಲ್ ಚಟುವಟಿಕೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ದೇಶದ ಜನತೆಗೆ ಭರವಸೆ ನೀಡಿದ್ದಾರೆ. ಅದನ್ನು ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.

2014ಕ್ಕೂ ಮೊದಲು ನಕ್ಸಲ್ ಚಟುವಟಿಕೆಯನ್ನು ನಿಯಂತ್ರಿಸಲು ಸೂಕ್ತ ನೀತಿ ಇರಲಿಲ್ಲ. ಪರಿಣಾಮವಾಗಿ ಪಶುಪತಿಯಿಂದ ತಿರುಪತಿಯವರೆಗೆ ‘ಕೆಂಪು ಕಾರಿಡಾರ್’ ನಿರ್ಮಾಣವಾಗಿ ದೇಶದ ಆಂತರಿಕ ಸುರಕ್ಷತೆಗೆ ಧಕ್ಕೆ ಎದುರಾಗಿತ್ತು ಎಂದು ನಿತ್ಯಾನಂದ ರಾಯ್ ಹೇಳಿದರು. ಪ್ರಸ್ತುತ ಎಡಪಂಥೀಯ ಚಟುವಟಿಕೆಗಳ ಕುರಿತು ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದೆ.

ನಕ್ಸಲ್ ಬಾಧಿತ 500ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದ್ದು, 10 ಸಾವಿರಕ್ಕೂ ಅಧಿಕ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ವಿವರಿಸಿದರು. ಜೊತೆಗೆ ಉನ್ನತ ಶಿಕ್ಷಣ ಸಂಸ್ಥೆಗಳು, ಕೌಶಲ ವಿಕಾಸ ಕೇಂದ್ರಗಳು, ಕೇಂದ್ರೀಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಲಯಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

2014ರಲ್ಲಿ 10 ರಾಜ್ಯಗಳಲ್ಲಿ ನಕ್ಸಲ್ ಪ್ರಭಾವ ಇದ್ದು, ಈಗ ಅದು ಶೇಕಡಾ 70ರಷ್ಟು ಇಳಿಕೆಯಾಗಿ ಕೇವಲ ಮೂರು ರಾಜ್ಯಗಳಿಗೆ ಸೀಮಿತವಾಗಿದೆ. ಹಿಂಸಾತ್ಮಕ ಘಟನೆಗಳಲ್ಲೂ ಗಣನೀಯ ಇಳಿಕೆ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

13 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago