ಅನ್ನಭಾಗ್ಯ ಯೋಜನೆಯಡಿ ಕಳೆದ ವರ್ಷದ ಜುಲೈ ನಿಂದ ಈ ವರ್ಷದ ಜುಲೈ ಅಂತ್ಯದವರೆಗೂ 8 ಸಾವಿರದ 433.11 ಕೋಟಿ ರೂಪಾಯಿ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ ಪ್ರತಿ ಸದಸ್ಯರಿಗೆ 170 ರೂಪಾಯಿಯಂತೆ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆ ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ ನಗದು ಬದಲಾವಣೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ಪಡಿತರ ಪಡೆಯದೇ ಇರುವುದು, ಒಂದು ವರ್ಷದಿಂದ ನೇರ ನಗದು ಸ್ವೀಕರಿಸದೇ ಇರುವುದು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ ವಾರ್ಷಿಕ ವರಮಾನ ಹೆಚ್ಚುತ್ತಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಸುಮಾರು 20 ಲಕ್ಷಕ್ಕೂ ಹೆಚ್ಚು ಅನರ್ಹ ಪಡಿತರ ಕಾರ್ಡ್ ಗಳಿದ್ದು ಅವುಗಳಲ್ಲಿ ಕನಿಷ್ಠ 10ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆಯಾಗಬಹುದು. ಅದಕ್ಕೆ ಅನುಗುಣವಾಗಿ ಅರ್ಜಿ ಆಹ್ವಾನಿಸಿ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಆಹಾರ ವ್ಯರ್ಥ ತಡೆಯುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲು ಸರ್ಕಾರ ಉದ್ದೇಶಿಸಿದೆ. ಈ ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ಆಹಾರ ತಜ್ಞರು ಹಾಗೂ ಆಹಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎನ್ ಜಿಒಗಳನ್ನು ಆಹ್ವಾನಿಸಲಾಗುವುದು. ‘ಎಲ್ಲರಿಗೂ ಆಹಾರ ಹಾಗೂ ಉತ್ತಮ ಜೀವನ ಮತ್ತು ಉತ್ತಮ ಭವಿಷ್ಯಕ್ಕಾಗಿ ಆಹಾರದ ಹಕ್ಕು’ ಘೋಷ ವಾಕ್ಯದಲ್ಲಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…