Advertisement
ಸುದ್ದಿಗಳು

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’

Share

ಗೋಕರ್ಣದ ಅಶೋಕೆಯಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, “ಅನ್ನವನ್ನು ದೇವರೆಂದು ಕಾಣುವ ಸಂಸ್ಕೃತಿ ಸನಾತನ ಭಾರತದ ಪರಂಪರೆಯಾಗಿದ್ದು, ಆಹಾರವು ಕೇವಲ ದೇಹದ ಪೋಷಣೆಗೆ ಮಾತ್ರವಲ್ಲ, ಉತ್ತಮ ಜೀವನ ಹಾಗೂ ಆಧ್ಯಾತ್ಮಿಕ ಪ್ರಗತಿಗೂ ಕಾರಣವಾಗುತ್ತದೆ” ಎಂದು ಹೇಳಿದರು.

ಗೋಕರ್ಣದ ಅಶೋಕೆಯ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯವು ಗುರುಗಳಿಗೆ ವ್ರತವಾದರೆ, ಶಿಷ್ಯಭಕ್ತರಿಗೆ ಅದು ಹಬ್ಬವಾಗಿದೆ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನವನ್ನು ಸಮಾಜಕ್ಕೆ ಪರಿಚಯಿಸುವ ಉದ್ದೇಶದಿಂದ ಈ ವರ್ಷದ ಚಾತುರ್ಮಾಸ್ಯವನ್ನು ‘ಅನ್ನಬ್ರಹ್ಮ ಚಾತುರ್ಮಾಸ್ಯ’ವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಅನ್ನ ವ್ಯರ್ಥ ಮಾಡುವ ಪ್ರವೃತ್ತಿಗೆ ಎಚ್ಚರಿಕೆ : ಇಂದು ಸಮಾಜದಲ್ಲಿ ಆರ್ಥಿಕ ಸಮೃದ್ಧಿ ಹೆಚ್ಚಾದಂತೆ ಅನ್ನವನ್ನು ವ್ಯರ್ಥ ಮಾಡುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಅನ್ನವನ್ನು ತಿರಸ್ಕರಿಸುವುದು, ಉಳಿದ ಆಹಾರವನ್ನು ವ್ಯರ್ಥ ಮಾಡುವುದು ಹಾಗೂ ಆಹಾರದ ಮಹತ್ವವನ್ನು ಮರೆತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಶ್ರೀಗಳು ವಿಷಾದ ವ್ಯಕ್ತಪಡಿಸಿದರು.

ಆಹಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಅನ್ನದ ಮೌಲ್ಯವನ್ನು ತಿಳಿಸುವುದು ಹಾಗೂ ಆಹಾರ ಸೇವನೆಯ ಸರಿಯಾದ ವಿಧಾನಗಳನ್ನು ಪರಿಚಯಿಸುವುದು ಈ ಚಾತುರ್ಮಾಸ್ಯದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಾಣಿ-ಮನುಷ್ಯರ ಆಹಾರ ಪದ್ಧತಿ ಕುರಿತು ಚಿಂತನೆ : ಪ್ರಾಣಿ-ಪಕ್ಷಿಗಳು ತಮ್ಮ ಜೀವನದ ಬಹುಭಾಗವನ್ನು ಆಹಾರ ಹುಡುಕುವುದರಲ್ಲಿ ಕಳೆಯುತ್ತವೆ. ಆದರೆ ಅವು ಪ್ರಕೃತಿಗೆ ಅನುಗುಣವಾದ ಆಹಾರವನ್ನಷ್ಟೇ ಸೇವಿಸುತ್ತವೆ. ಮನುಷ್ಯ ಮಾತ್ರ ಯೋಗ್ಯವಲ್ಲದ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಆಹಾರದ ಹಿನ್ನೆಲೆ, ತಯಾರಿಕೆ, ಸೇವನೆ ಮತ್ತು ಅದರ ಉದ್ದೇಶಕ್ಕೆ ಸಮಾಜದಲ್ಲಿ ಅಗತ್ಯ ಪ್ರಾಮುಖ್ಯತೆ ಸಿಗುತ್ತಿಲ್ಲ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಚಾತುರ್ಮಾಸ್ಯದ ಮೂಲಕ ನಡೆಯಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ಚಾತುರ್ಮಾಸ್ಯ :  ಗೋಕರ್ಣದ ಅಶೋಕೆಯ ಪರಿಸರದಲ್ಲಿ ಈ ವರ್ಷದ ‘ಅನ್ನಬ್ರಹ್ಮ ಚಾತುರ್ಮಾಸ್ಯ’ವು ಜುಲೈ 29ರಿಂದ ಸೆಪ್ಟೆಂಬರ್ 26, 2026ರವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಆಹಾರದ ಮಹತ್ವ, ಭೋಜನವೆಂಬ ತಪಸ್ಸು, ಆಹಾರ ಸೇವನೆಯ ಸರಿಯಾದ ಸಮಯ, ಜಲಪಾನದ ನಿಯಮಗಳು, ಉಪವಾಸದ ಮಹತ್ವ, ಭೋಜನದ ನಂತರ ಪಾಲಿಸಬೇಕಾದ ನಿಯಮಗಳು, ಭೋಜನ ಪಾತ್ರೆಗಳ ವೈಶಿಷ್ಟ್ಯ ಸೇರಿದಂತೆ ಅನೇಕ ವಿಷಯಗಳ ಕುರಿತು ವಿಶೇಷ ಪ್ರವಚನ ಮಾಲಿಕೆಗಳು ನಡೆಯಲಿವೆ.

ಜ್ಞಾನೋದ್ದೀಪನದ ಜೊತೆಗೆ ಪ್ರಾಚೀನ ಭಾರತೀಯ ಆಹಾರ ಪದ್ಧತಿಗಳ ಪರಿಚಯವೂ ಈ ಚಾತುರ್ಮಾಸ್ಯದ ವಿಶೇಷ ಆಕರ್ಷಣೆಯಾಗಲಿದೆ.

ಕಾರ್ಯಕ್ರಮದಲ್ಲಿ ಶ್ರೀಮಠದ ಆಡಳಿತಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್., ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Sri Raghaveshwara Bharathi Mahaswamiji launched the invitation for “Annabrahma Chaturmasya” at Gokarna Ashoke Math. The event, scheduled from July 29 to September 26, 2026, will focus on food awareness, preventing food wastage, traditional dietary wisdom, fasting practices, and the spiritual significance of food in Indian culture.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

5 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

13 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

14 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

15 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago