Advertisement
ಸುದ್ದಿಗಳು

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

Share

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ ಬುಧವಾರ ‘ಅನ್ನಬ್ರಹ್ಮ ಚಾತುರ್ಮಾಸ್ಯ’ವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಿಸಲಾಯಿತು. ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಸಮಾಜಕ್ಕೆ ಸರಿಯಾದ ದಾರಿಯನ್ನು ತೋರಿಸುವುದು ಮಠದ ಮೂಲ ಉದ್ದೇಶವಾಗಬೇಕು ಎಂದು ಹೇಳಿದರು.

“ಸರಿಯನ್ನು ಬಲ್ಲವನು ಕೇವಲ ಜ್ಞಾನಿ. ಸರಿಯನ್ನು ಬಲ್ಲವನು ಹಾಗೂ ಸರಿಯಾದ ದಾರಿಯನ್ನು ಇತರರಿಗೆ ತೋರುವವನು ಗುರು” ಎಂದು ಹೇಳಿದ ಶ್ರೀಗಳು, ಆದಿ ಶಂಕರಾಚಾರ್ಯರು ಯಾವುದೇ ಸೈನ್ಯ ಅಥವಾ ಸಂಪತ್ತಿನ ಆಧಾರವಿಲ್ಲದೆ ದೇಶಾದ್ಯಂತ ಸಂಚರಿಸಿ ಧರ್ಮ ಸಂರಕ್ಷಣೆಯ ಕಾರ್ಯವನ್ನು ನಡೆಸಿದರು. ಆ ಕಾರ್ಯ ನಿರಂತರವಾಗಿ ನಡೆಯಲೆಂದು ದೇಶದಾದ್ಯಂತ ಮಠಗಳನ್ನು ಸ್ಥಾಪಿಸಿದರು. ಆದ್ದರಿಂದ ಶಂಕರಾಚಾರ್ಯರ ಉದ್ದೇಶವೇ ಮಠದ ಉದ್ದೇಶವಾಗಿರಬೇಕು ಎಂದು ತಿಳಿಸಿದರು.

ಶಂಕರರು ತೋರಿದ ಮಾರ್ಗದಲ್ಲಿ ಧರ್ಮಪ್ರಚಾರ ನಡೆಸುವುದರ ಜೊತೆಗೆ ಸಮಾಜಕ್ಕೆ ಸರಿ-ತಪ್ಪುಗಳ ಕುರಿತು ಮಾರ್ಗದರ್ಶನ ನೀಡುವುದು ಮಠದ ಜವಾಬ್ದಾರಿ ಎಂದು ಅವರು ಹೇಳಿದರು. ಇದೇ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಪ್ರಮುಖ ಉದ್ದೇಶವೂ ಆಗಿದೆ ಎಂದು ವಿವರಿಸಿದರು.

ಸಮಾಜಕ್ಕೆ ಸತ್ಯ ಹೇಳುವವರಿಗೆ ವಿರೋಧ ಸಹಜ : ಸಮಾಜಕ್ಕೆ ಸರಿಯಾದ ವಿಚಾರಗಳನ್ನು ತಿಳಿಸುವವರಿಗೆ ವಿರೋಧಿಗಳು ಹುಟ್ಟುವುದು ಪ್ರಕೃತಿ ಸಹಜ ಎಂದು ಶ್ರೀಗಳು ಹೇಳಿದರು. ರಾಮ, ಕೃಷ್ಣ ಸೇರಿದಂತೆ ಎಲ್ಲ ಮಹಾತ್ಮರ ಜೀವನದಲ್ಲಿಯೂ ಇದನ್ನು ಕಾಣಬಹುದು. ಆದರೂ ಸತ್ಯದ ಮಾರ್ಗದಲ್ಲಿ ನಡೆಯುವವರು ಇಂತಹ ಸವಾಲುಗಳನ್ನು ಎದುರಿಸಲೇಬೇಕು ಎಂದು ಕರೆ ನೀಡಿದರು.

ಆಹಾರದ ಬಗ್ಗೆ ಜಾಗೃತಿ ಅಗತ್ಯ :  ಕಳೆದ ವರ್ಷ ‘ಸ್ವಭಾಷಾ ಚಾತುರ್ಮಾಸ್ಯ’ವನ್ನು ಆಚರಿಸಿದ್ದರೆ, ಈ ವರ್ಷ ಆಹಾರದ ಮಹತ್ವವನ್ನು ಸಾರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ವನ್ನು ಆಚರಿಸಲಾಗುತ್ತಿದೆ ಎಂದು ಶ್ರೀಗಳು ಹೇಳಿದರು.

ಇಂದು ಮುಖ್ಯ ವಿಚಾರಗಳು ಗೌಣವಾಗುತ್ತಿದ್ದು, ಗೌಣ ವಿಚಾರಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ನಾವು ಏನು ತಿನ್ನುತ್ತಿದ್ದೇವೆ, ಹೇಗೆ ತಿನ್ನುತ್ತಿದ್ದೇವೆ ಮತ್ತು ಆಹಾರವನ್ನು ಹೇಗೆ ತಯಾರಿಸಲಾಗಿದೆ ಎಂಬುದರ ಬಗ್ಗೆ ಸಮಾಜದಲ್ಲಿ ಸಮರ್ಪಕ ಅರಿವು ಇಲ್ಲ ಎಂದರು.

“ನಾವು ಏನನ್ನು ತಿನ್ನುತ್ತೇವೋ ಅದೇ ನಾವಾಗುತ್ತೇವೆ” ಎಂದು ಹೇಳಿದ ಶ್ರೀಗಳು, ಆಹಾರದ ಕುರಿತಾದ ಸರಿ-ತಪ್ಪುಗಳನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿಯನ್ನು ಮಠ ವಹಿಸಿಕೊಂಡಿದೆ ಎಂದು ತಿಳಿಸಿದರು.

ವ್ಯಾಸಪೂಜೆಯೊಂದಿಗೆ ಚಾತುರ್ಮಾಸ್ಯ ಆರಂಭ : ಇದಕ್ಕೂ ಮೊದಲು ಶ್ರೀಗಳು ತಮ್ಮ 33ನೇ ಚಾತುರ್ಮಾಸ್ಯ ವ್ರತವನ್ನು ವ್ಯಾಸಪೂಜೆಯ ಮೂಲಕ ವಿಧಿವತ್ತಾಗಿ ಆರಂಭಿಸಿದರು. ಶ್ರೀರಾಮಾದಿ ದೇವರ ಪೂಜೆ, ವ್ಯಾಸಾದಿ ಋಷಿಗಳ ಆವಾಹನೆ ಹಾಗೂ ಮಠೀಯ ಸಂಪ್ರದಾಯದಂತೆ ಪೂಜಾ ವಿಧಿಗಳು ನೆರವೇರಿದವು.

ಮುಗಳಿ ತಿರುಮಲೇಶ್ವರ ಭಟ್ ಸರ್ವಸೇವೆ ಸಮರ್ಪಿಸಿದರೆ, ಮಂಜುನಾಥ ಸುವರ್ಣಗದ್ದೆ ದಂಪತಿಗಳು ಸಭಾಪೂಜೆ ಸಲ್ಲಿಸಿದರು. ದೇವಿಕಾ ಶಾಸ್ತ್ರಿ ಪ್ರಸ್ತಾವನೆ ಮಾಡಿದರು. ಜಿ.ಎಸ್. ಹೆಗಡೆ ದಂಪತಿಗಳು ದಿನ ಪ್ರಧಾನರಾಗಿ ಸೇವೆ ಸಲ್ಲಿಸಿದರು.

Jagadguru Shankaracharya Sri Raghaveshwara Bharathi Mahaswamiji inaugurated the 33rd Chaturmasya observance at the Ashoke Moola Math in Gokarna. Addressing the gathering, he said the true duty of a Guru and a Math is to guide society on the right path and emphasised that “we become what we eat,” highlighting the importance of food awareness through this year’s ‘Annabrahma Chaturmasya’.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

10 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago