ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ | ಮೇಘಸ್ಫೋಟದಿಂದ ದಿಢೀರ್ ಪ್ರವಾಹ-ಭೂಕುಸಿತ

August 31, 2025
10:08 PM

ಜಮ್ಮು-ಕಾಶ್ಮೀರದಲ್ಲಿ  ಮತ್ತೆ ನಿನ್ನೆ  ಮೇಘಸ್ಫೋಟ ಸಂಭವಿಸಿದೆ.  ರಾಸಿ ಜಿಲ್ಲೆಯಲ್ಲಿ  ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮನೆಯೊಂದು ಕುಸಿತಗೊಂಡು ಐವರು ಮಕ್ಕಳು ಸೇರಿದಂತೆ  7 ಮಂದಿ ಮೃತಪಟ್ಟಿದ್ದಾರೆ.

ಅತಿವೃಷ್ಟಿ ಹಾಗೂ ದಿಢೀರ್ ಪ್ರವಾಹದಿಂದ ಇದುವರೆಗೆ ಕಣಿವೆ ರಾಜ್ಯದಲ್ಲಿ 11 ಮಂದಿ ಮೃತಪಟ್ಟಿದ್ದು, ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ  ಉತ್ತರಾಖಂಡ್ ನ ವಿವಿಧ ಸ್ಥಳಗಳಲ್ಲೂ ನಿನ್ನೆ ಮೇಘಸ್ಫೋಟದ ಘಟನೆಗಳು ವರದಿಯಾಗಿವೆ.  ರುದ್ರಪ್ರಯಾಗ ಜಿಲ್ಲೆಯ ತೆಂಡ್ವಾಲ್  ಗ್ರಾಮದಲ್ಲಿ  ಮಹಿಳೆಯೊಬ್ಬರು ಮೃತಪಟ್ಟಿದ್ದು, 18 ರಿಂದ 20 ಮಂದಿ ಕಾಣೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ದೇವಲ್ ಬ್ಲಾಕ್ ನಲ್ಲಿ  20 ಜಾನುವಾರುಗಳು ಮೃತಪಟ್ಟಿವೆ. ತೆಹ್ರಿ, ರುದ್ರಪ್ರಯಾಗ್, ಜಕೋಲಿ, ಬಂಗಾರ್ ಸೇರಿದಂತೆ  ಹಲವು ಸ್ಥಳಗಳಲ್ಲಿ ಮೇಘ ಸ್ಫೋಟ ಹಾಗೂ ಅತಿವೃಷ್ಟಿಯಿಂದ ಭಾರೀ ಪ್ರಮಾಣದಲ್ಲಿ ಹಾನಿಯಾಗಿರುವುದಾಗಿ ವರದಿಯಾಗಿದೆ. ಇದೇ ವೇಳೆ  ಇಂದು ಸಹ  ರಾಜಸ್ತಾನ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶಗಳಲ್ಲಿ ಮುಂದಿನ ಎರಡು ಮೂರು ದಿನಗಳ  ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲೂ ಬಿರುಗಾಳಿ ಸಹಿತ  ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror