Advertisement
ವೆದರ್ ಮಿರರ್

ಹವಾಮಾನ ವರದಿ | 30-08-2025 | ಸೆ.2 ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ..! ಕಾರಣ ಏನು..?

Share

31.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಇರಬಹುದು. ಈಗಿನಂತೆ ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಸೆಪ್ಟೆಂಬರ್ 1 ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2 ರಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 1 ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2 ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

ಒಳನಾಡು : ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಾವಣಗೆರೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.  ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಭಾರಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.

ಸೆಪ್ಟೆಂಬರ್ 2 ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 6ರಂದು ಮಹಾರಾಷ್ಟ್ರ, ಗುಜರಾತ್ ತಲಪುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

16 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

16 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

16 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

16 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago