ಹವಾಮಾನ ವರದಿ | 16-10-2025 | ಸದ್ಯ ಗುಡುಗು ಸಹಿತ ಮಳೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ-ಪರಿಣಾಮ ಏನು?

October 16, 2025
2:02 PM
ಅರಬ್ಬಿ ಸಮುದ್ರದ ದಕ್ಷಿಣ ಕೇರಳ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ.

17.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಹಾಗೂ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 18ರಿಂದ ಉತ್ತರ ಒಳನಾಡು ಬಹುತೇಕ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ದಕ್ಷಿಣ ಕೇರಳ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸುಬ್ರಾಯ ಚೊಕ್ಕಾಡಿ ಅವರಿಗೆ ‘ಮೋಹನ ಮುರಳಿ ಕವಿಸಮ್ಮಾನ’ ಪ್ರದಾನ
November 21, 2026
8:36 PM
by: ದ ರೂರಲ್ ಮಿರರ್.ಕಾಂ
ಕಲ್ಮಡ್ಕದಲ್ಲೂ ಶುರುವಾಯಿತು ಸ್ವಚ್ಛತಾ ಆಂದೋಲನ – ಯುವಶಕ್ತಿಗೆ ಗ್ರಾಮಸ್ಥರ ಸಾಥ್!
November 21, 2026
8:19 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.11.2026 | ನವೆಂಬರ್ 23ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಹಿಂಗಾರು ಮಳೆ ಮುನ್ಸೂಚನೆ
November 21, 2026
1:59 PM
by: ಸಾಯಿಶೇಖರ್ ಕರಿಕಳ
Free notebook distribution for Karnataka government school students
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ
November 21, 2026
11:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror