17.10.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಹಾಗೂ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 18ರಿಂದ ಉತ್ತರ ಒಳನಾಡು ಬಹುತೇಕ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ದಕ್ಷಿಣ ಕೇರಳ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ.
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…