Advertisement
ವೆದರ್ ಮಿರರ್

ಹವಾಮಾನ ವರದಿ | 28.11.2025 | ಇನ್ನೊಂದು ಚಂಡಮಾರುತ – ಎಲ್ಲೆಲ್ಲಿ ಮಳೆ ಸಾಧ್ಯತೆ…?

Share

29.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಕೊಡಗು, ಹಾಸನ, ಚಿಕ್ಕಮಗಳೂರು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣದ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ರಾತ್ರಿಯಿಂದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಛಳಿಯ ಪ್ರಮಾಣ ಕಡಿಮೆಯಾಗಬಹುದು.

ಉತ್ತರ ಶ್ರೀಲಂಕಾ ತಲುಪಿರುವ “ದಿತ್ವಾ” ಚಂಡಮಾರುತವು ನ. 29ರಂದು ತಮಿಳುನಾಡು ಕರಾವಳಿ ತೀರಕ್ಕೆ ಆಗಮಿಸುವ ನಿರೀಕ್ಷೆ ಇದೆ. 30 ಅಥವಾ ಡಿ. 1 ರಂದು ಆಂದ್ರಾ ತೀರದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

ಇದರ ಪ್ರಭಾವದಿಂದ ನ. 29ರಿಂದ ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡು ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು ಡಿ. 3 ಅಥವಾ 4 ನೇ ತಾರೀಖಿನ ತನಕ ಮುಂದುವರಿಯುವ ಮುನ್ಸೂಚನೆ ಇದೆ. ನಂತರ ಮತ್ತೆ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಚಂಡಮಾರುತದ ಕಾರಣದಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಆಂಧ್ರಾ ಗಡಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

18 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

19 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

2 days ago