#DrugAbuseDay | ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

June 26, 2023
8:51 PM

ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಫಿಲೋಮಿನಾ ಕಾಲೇಜು ಪ್ರೌಢಶಾಲೆಯ ಎನ್ ಸಿ ಸಿ ಘಟಕಗಳು ಹಾಗೂ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜಾಥಾವನ್ನು ಆಯೋಜಿಸಲಾಯಿತು.

Advertisement
Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ|ಡಾ| ಆಂಟೊನಿ ಪ್ರಕಾಶ್ ಮೊಂತೆರೊ ಮಾತನಾಡಿ,  “ಯುವ ಶಕ್ತಿಯು ರಾಷ್ಟ್ರದ ಪ್ರಬಲ ಶಕ್ತಿಯಾಗಿದೆ. ಆದರೆ ಇಂದಿನ ಯುವಕರು ಮಾದಕ ದ್ರವ್ಯ ಸೇವನೆಯ ವ್ಯಸನಕ್ಕೆ ತುತ್ತಾಗಿ ಹಲವಾರು ರೋಗಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಇದು ದೇಶದ ಆರ್ಥಿಕತೆ ಹಾಗೂ ಪ್ರಗತಿಗೆ ಮಾರಕವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರ ದುಷ್ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಎನ್ ಸಿ ಸಿ ಕೆಡೆಟ್‌ ಗಳ  ಈ ಪುಟ್ಟ ಪ್ರಯತ್ನ ಅಭಿನಂದನಾರ್ಹ” ಎಂದು ಹೇಳಿದರು.

Advertisement

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ರಾಥೋಡ್ “ಮಾದಕ ದ್ರವ್ಯವನ್ನು ತಯಾರಿಸುವುದು, ಸರಬರಾಜು ಮಾಡುವುದು ಹಾಗೂ ಸೇವಿಸುವುದು ಇವೆಲ್ಲವೂ ಶಿಕ್ಷಾರ್ಹ ಅಪರಾಧಗಳಾಗಿವೆ. ಇಂತಹ ಪಿಡುಗು ಇಂದಿನ ಯುವ ಜನತೆಯನ್ನು ದಾರಿ ತಪ್ಪಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಅತಿ ಅಗತ್ಯ. ಮಾದಕ ದ್ರವ್ಯಗಳ ಕಳ್ಳ ಸಾಗಣೆಯನ್ನು ಹಾಗೂ ಅವುಗಳ ಬಳಕೆಯನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯುವಜನರ ಸಹಾಯ ಅಗತ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಬಳಕೆ ಹಾಗೂ ಸಾಗಾಣಿಕೆಗೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಎನ್ ಸಿ ಸಿ ಕೆಡೆಟ್ ಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

Advertisement

ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಅಶೋಕ್ ರಯಾನ್ ಕ್ರಾಸ್ತ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಮ್ಯಾಕ್ಸಿಮ್ ಡಿಸೋಜ, ಹವಾಲ್ದಾರ್ ತಂಗವೇಲು, ಹವಾಲ್ದಾರ್ ಸುರೇಶ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಎನ್ ಸಿ ಸಿ ಅಧಿಕಾರಿಯಾದ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೆರಾ, ನೌಕಾದಳದ ಅಧಿಕಾರಿಯಾದ ತೇಜಸ್ವಿ ಭಟ್, ಸಂತ ಫಿಲೋಮಿನಾ ಪ್ರೌಢಶಾಲೆಯ ಎನ್ ಸಿ ಸಿ ಅಧಿಕಾರಿಗಳಾದ ನರೇಶ್ ಲೋಬೋ, ಕ್ಲೆಮೆಂಟ್ ಪಿಂಟೋ, ಹಾಗೂ ರೋಶನ್ ಸಿಕ್ವೆರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಯ ಸಂಯೋಜಕರಾದ ಪೌಲ್ ಹೆರಾಲ್ಡ್ ಮಸ್ಕರೇಞಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror