ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಫಿಲೋಮಿನಾ ಕಾಲೇಜು ಪ್ರೌಢಶಾಲೆಯ ಎನ್ ಸಿ ಸಿ ಘಟಕಗಳು ಹಾಗೂ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜಾಥಾವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ|ಡಾ| ಆಂಟೊನಿ ಪ್ರಕಾಶ್ ಮೊಂತೆರೊ ಮಾತನಾಡಿ, “ಯುವ ಶಕ್ತಿಯು ರಾಷ್ಟ್ರದ ಪ್ರಬಲ ಶಕ್ತಿಯಾಗಿದೆ. ಆದರೆ ಇಂದಿನ ಯುವಕರು ಮಾದಕ ದ್ರವ್ಯ ಸೇವನೆಯ ವ್ಯಸನಕ್ಕೆ ತುತ್ತಾಗಿ ಹಲವಾರು ರೋಗಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಇದು ದೇಶದ ಆರ್ಥಿಕತೆ ಹಾಗೂ ಪ್ರಗತಿಗೆ ಮಾರಕವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರ ದುಷ್ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಎನ್ ಸಿ ಸಿ ಕೆಡೆಟ್ ಗಳ ಈ ಪುಟ್ಟ ಪ್ರಯತ್ನ ಅಭಿನಂದನಾರ್ಹ” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ರಾಥೋಡ್ “ಮಾದಕ ದ್ರವ್ಯವನ್ನು ತಯಾರಿಸುವುದು, ಸರಬರಾಜು ಮಾಡುವುದು ಹಾಗೂ ಸೇವಿಸುವುದು ಇವೆಲ್ಲವೂ ಶಿಕ್ಷಾರ್ಹ ಅಪರಾಧಗಳಾಗಿವೆ. ಇಂತಹ ಪಿಡುಗು ಇಂದಿನ ಯುವ ಜನತೆಯನ್ನು ದಾರಿ ತಪ್ಪಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಅತಿ ಅಗತ್ಯ. ಮಾದಕ ದ್ರವ್ಯಗಳ ಕಳ್ಳ ಸಾಗಣೆಯನ್ನು ಹಾಗೂ ಅವುಗಳ ಬಳಕೆಯನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯುವಜನರ ಸಹಾಯ ಅಗತ್ಯ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಬಳಕೆ ಹಾಗೂ ಸಾಗಾಣಿಕೆಗೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಎನ್ ಸಿ ಸಿ ಕೆಡೆಟ್ ಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಅಶೋಕ್ ರಯಾನ್ ಕ್ರಾಸ್ತ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಮ್ಯಾಕ್ಸಿಮ್ ಡಿಸೋಜ, ಹವಾಲ್ದಾರ್ ತಂಗವೇಲು, ಹವಾಲ್ದಾರ್ ಸುರೇಶ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಎನ್ ಸಿ ಸಿ ಅಧಿಕಾರಿಯಾದ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೆರಾ, ನೌಕಾದಳದ ಅಧಿಕಾರಿಯಾದ ತೇಜಸ್ವಿ ಭಟ್, ಸಂತ ಫಿಲೋಮಿನಾ ಪ್ರೌಢಶಾಲೆಯ ಎನ್ ಸಿ ಸಿ ಅಧಿಕಾರಿಗಳಾದ ನರೇಶ್ ಲೋಬೋ, ಕ್ಲೆಮೆಂಟ್ ಪಿಂಟೋ, ಹಾಗೂ ರೋಶನ್ ಸಿಕ್ವೆರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಯ ಸಂಯೋಜಕರಾದ ಪೌಲ್ ಹೆರಾಲ್ಡ್ ಮಸ್ಕರೇಞಸ್ ಕಾರ್ಯಕ್ರಮ ನಿರೂಪಿಸಿದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…