ರಾಜ್ಯದಲ್ಲಿ ನಕ್ಸಲ್ ನಿಗ್ರಹ ಘಟಕ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ | ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

March 22, 2025
2:25 PM

ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

Advertisement
Advertisement

ವಿಧಾನ ಪರಿಷತ್ ನಲ್ಲಿ  ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ  ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ  ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ.  ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror