ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…