26.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು.
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.