Karnataka Weather | 25-06-2024 | ಮಳೆ ಜೋರಿಲ್ಲ…! | ಜುಲೈ ಮೊದಲ ವಾರದಿಂದ ಬಿರುಸಿನ ಮಳೆ ನಿರೀಕ್ಷೆ |

June 25, 2024
1:51 PM
ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.

26.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. 

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror