ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

October 2, 2023
8:59 PM

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು.

ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹುಕ್ಕೇರಿಯ ಚರಂತೇಶ್ವರ ಮಠದ  ಶ್ರೀ ಶರಣ ಬಸವ ದೇವರು ಪ್ರದಾನ ಮಾಡಿದರು.

ಸಾಹಿತಿ, ಕವಿ ಶರಜೂ ಕಾಟ್ಕರ್ , ಸಾವಿತ್ರಿಬಾಯಿ ಪುಲೆ ಚಲನಚಿತ್ರ ನಿರ್ಮಾಪಕ ಬಸವರಾಜ್ ಭೂತಾಳಿ, ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ವಾಯ್ ಉಪ್ಪಾರಹಟ್ಟಿ ಮೊದಲಾದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror