ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು.
ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹುಕ್ಕೇರಿಯ ಚರಂತೇಶ್ವರ ಮಠದ ಶ್ರೀ ಶರಣ ಬಸವ ದೇವರು ಪ್ರದಾನ ಮಾಡಿದರು.
ಸಾಹಿತಿ, ಕವಿ ಶರಜೂ ಕಾಟ್ಕರ್ , ಸಾವಿತ್ರಿಬಾಯಿ ಪುಲೆ ಚಲನಚಿತ್ರ ನಿರ್ಮಾಪಕ ಬಸವರಾಜ್ ಭೂತಾಳಿ, ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ವಾಯ್ ಉಪ್ಪಾರಹಟ್ಟಿ ಮೊದಲಾದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…