Advertisement
ಸುದ್ದಿಗಳು

ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿಯವರಿಗೆ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ-2023”

Share
ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು
ನಾಡಿನ ಸಮಾಚಾರ ಸೇವಾ ಸಂಘ (ರಿ),  ಗೋಕಾಕ, ಬೆಳಗಾವಿ  ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ.
ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,  ಸೆಪ್ಟೆಂಬರ್ 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹಮ್ಮಿಕೊಂಡ ‘ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಈ ಹಿಂದೆ ಚಂದನ ಟಿವಿಯ ಸ್ವರ ಮಾಧುರ್ಯ ಪ್ರಶಸ್ತಿಯೊಂದಿಗೆ ಹಲವು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಸ್ವೀಕರಿಸಿರುವ ಡಾ. ಅನುರಾಧಾ ಕುರುಂಜಿಯವರು ಈ ಪ್ರಶಸ್ತಿಗೆ ಆಯ್ಕೆಯಾಗಲು, ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿ ದೆಸೆಯಲ್ಲಿರುವಾಗಲೇ ಎನ್ಎಸ್ಎಸ್ ನಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ಎರಡೂ ಹಂತದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ (RD Parade)  ಭಾಗವಹಿಸಿದ ಸುಳ್ಯ ತಾಲೂಕಿನ ಪ್ರಪ್ರಥಮ ಹಾಗೂ ಸುಳ್ಯ ಎನ್ನೆಂಸಿಯ 47 ವರ್ಷಗಳ ಇತಿಹಾಸದಲ್ಲಿಯೇ ಏಕೈಕ ವಿದ್ಯಾರ್ಥಿನಿ ಎಂಬ ದಾಖಲೆ. ಸ್ಕೌಟ್ – ಗೈಡ್ ಶಿಕ್ಷಕಿಯಾಗಿ ರಾಜ್ಯದ ಅತ್ಯುತ್ತಮ ಪುರಸ್ಕಾರ “ಹಿಮಾಲಯನ್ ವುಡ್ ಬ್ಯಾಡ್ಜ್ “ ಪ್ರಶಸ್ತಿ ಸ್ವೀಕಾರ. ರೆಡ್ ಕ್ರಾಸ್ ನ ಕಾರ್ಯಕ್ರಮಾಧಿಕಾರಿಯಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವುದರೊಂದಿಗೆ 300ಕ್ಕೂ ಅಧಿಕ ವಿದ್ಯಾರ್ಥಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ಎರಡು ಬಾರಿ ಮಂಗಳೂರು ವಿವಿ ಮಟ್ಟದ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಹಾಗೂ ಘಟಕ  ಪ್ರಶಸ್ತಿ, ಸಾಮಾಜಿಕವಾಗಿ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಚಂದನ ಟಿವಿಯಲ್ಲಿ ತರಬೇತಿ ನೀಡಿದುದಲ್ಲದೇ ದಾಖಲೆಯ 1639  ತರಬೇತಿ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ, ಜ್ಞಾನ ಪ್ರಸರಣೆಯಲ್ಲಿ ನಿರತ, ಜೇಸಿರೆಟ್  ಅಧ್ಯಕ್ಷೆಯಾಗಿ ದಾಖಲೆಯ ಎರಡು ವಲಯ, ಮೂರು ರಾಷ್ಟ್ರ ಪ್ರಶಸ್ತಿಗಳ ಗರಿ,  ವಿವಿಧ ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿ ಸೇವೆ, ಸಾಹಿತ್ಯಕವಾಗಿ ಡಾಕ್ಟರೇಟ್ ಪದವಿ ಪಡೆಯುವುದರೊಂದಿಗೆ ಐದು ಕೃತಿಗಳ ಅನಾವರಣ,
ವಿವಿಧ ಸಂಸ್ಥೆಗಳ ಗೃಹ ಪತ್ರಿಕೆ, ವಾರ್ತಾ ಪತ್ರಿಕೆಗಳ ಸಂಪಾದಕತ್ವ, ಆಕಾಶವಾಣಿಗಳಲ್ಲಿ ನಿರಂತರ ಭಾಷಣಗಳ ಬಿತ್ತರ, ಕವಿಗೋಷ್ಠಿ, ಸಂಶೋಧನಾ ಲೇಖನಗಳ ಪ್ರಕಟ,  ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ, ಯಕ್ಷಗಾನ, ಕ್ರೀಡೆ, ಸಂಗೀತ, ಸಮಾಜ ಸೇವೆಯಲ್ಲಿ ಆಸಕ್ತಿ. ಹೀಗೆ ಇವರ ಈ ಎಲ್ಲಾ  ಶೈಕ್ಷಣಿಕ, ಸಾಹಿತ್ಯಕ, ಸಾಮಾಜಿಕ, ಸಂಘಟನಾ  ಕ್ಷೇತ್ರದ ಕಾರ್ಯವೈಖರಿಯನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ದಿ. ಸೀತಮ್ಮ ಕುರುಂಜಿ ದಂಪತಿಗಳ ಪುತ್ರಿ ಹಾಗೂ ಕೆವಿಜಿ  ಪಾಲಿಟೆಕ್ನಿಕ್ ನ  ಶಿಕ್ಷಕ ಚಂದ್ರಶೇಖರ್ ಬಿಳಿನೆಲೆಯವರ ಪತ್ನಿ .
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

12 hours ago

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |

ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್‌ ಫಾರ್ಕಾಸ್ಟ್ ಅಂದರೆ ಯಾವ…

18 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

19 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

21 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago