ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯ ಅಪಹರಣ ಪ್ರಕರಣದ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂತಿಮ ವರ್ಷದ ಎಂ.ಎಸ್ಸಿ. ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯ ಅಪಹರಣ ಪ್ರಕರಣ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಅನ್ವಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.
ಈ ಮಧ್ಯೆ, ಆರೋಪಿ ಮಡಿಕೇರಿ ನಿವಾಸಿ ಮುರಳಿರಾಜ್ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಪರ ವಾದ ಆಲಿಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪಲ್ಲವಿ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ವಾದ ಮಂಡಿಸಿದ್ದರು.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…