ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

July 25, 2025
11:05 PM

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ  ಡಿಕೆ ಸ್ಯಾಂಡ್ ಬಝಾರ್ ಆ್ಯಪ್  ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. DK SAND BAZAARAPP ಮುಖಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಆನ್‍ಲೈನ್ (DK SAND BAZAARAPP) ಮುಖಾಂತರ ಪಡೆಯಬಹುದು.

15 ಮರಳು ಬ್ಲಾಕ್‍ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್ 5 ರಿಂದ ಅಕ್ಟೋಬರ್ 15 ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್ ಗಳಲ್ಲಿ ಮಾರ್ಚ್ 2025 ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿರುತ್ತದೆ.

ಅಲ್ಲದೆ ILMS (Integrated Lease Management System) ತಂತ್ರಾಂಶದಲ್ಲಿ 36,737 ಮೆ.ಟನ್ ಮರಳು ಸಾಗಾಣಿಕೆಯಾಗಿರುತ್ತದೆ. ಅಲ್ಲದೆ ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 43,848 ಮೆ.ಟನ್ ಮರಳನ್ನು ಬುಕಿಂಗ್ ಮಾಡಲು dksandbazaar.com ವೆಬ್‍ಸೈಟ್‍ನಲ್ಲಿ ಬುಕ್ ಮಾಡಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಥವಾ  ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್‍ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇದ್ದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯವರ ಕಚೇರಿ (ದೂರವಾಣಿ ಸಂಖ್ಯೆ: 0824-2429932/ 6364019555)   ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror