ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ . ಈಗಾಗಲೇ ಅತಿಯಾದ ಮಳೆಯ ಕಾರಣಕ್ಕೆ ಕೆಲಸ ಮಾಡಲು ಕಷ್ಟಪಡುತ್ತಿರುವ ಕಟ್ಟಡ ಕಾರ್ಮಿಕರಿಗೆ ಇದೀಗ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು ಕೂಡಲೇ ಕೆಂಪು ಕಲ್ಲು ಗಣಿಗಾರಿಕೆಯನ್ನು ಆಶ್ರಯಿಸಿ ಬದುಕು ನಡೆಸುತ್ತಿರುವ ಸಂತ್ರಸ್ತ ಕಾರ್ಮಿಕರ ನೆರವಿಗೆ ತುರ್ತಾಗಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಅವರು ಬೆಂಗಳೂರಿನ ವಿಕಾಸಸೌದದಲ್ಲಿ ಕಾರ್ಮಿಕ ಸಚಿವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಈ ಬಗ್ಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಪೂರಕವಾಗಿ ಸ್ಪಂದಿಸಿದ್ದು ಕೂಡಲೇ ಸಂಬಂಧಪಟ್ಟ ಸಚಿವರುಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490