ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯ ನಂತರ ಅವರು, ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಮಾವಿನ ದರ ಕುಸಿದಿರುವುದು ಹಾಗೂ ಆಂಧ್ರಕ್ಕೆ ಪೂರೈಕೆ ಮಾಡಲು ನಿರ್ಬಂಧ ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಮಾವು ಬೆಳೆಗಾರರಿಗೆ ಕೇಂದ್ರದಿಂದ ಹೆಚ್ಚಿನ ನೆರವನ್ನು ಪಡೆಯುವ ಜವಾಬ್ದಾರಿಯನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂಪಾಯಿ ವರೆಗೆ ನಗದುರಹಿತ ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು 18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…