ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಮನವಿ ಮಾಡಿದರು. ವಿಷಯ ಪ್ರಸ್ತಾಪಿಸಿದ ಅವರು, ಅರಣ್ಯ ಸಂರಕ್ಷಿಸುವ ಹೆಸರಿನಲ್ಲಿ ಕರ್ನಾಟಕ ಮತ್ತು ತೆಲಂಗಾಣ ಸರ್ಕಾರಗಳು , ಅರಣ್ಯ, ಜಮೀನನ್ನು ಇತರ ಉದ್ದೇಶಗಳಿಗೆ ನೀಡಿ ಲಾಭ ಮಾಡಿಕೊಳ್ಳಲು ಹೊರಟಿವೆ. ಹೈದರಾಬಾದ್ ನಲ್ಲಿ 400 ಎಕರೆ ಅರಣ್ಯ ಜಮೀನನ್ನು ರಾತ್ರೋರಾತ್ರಿ ನೆಲಸಮ ಮಾಡಿ , ರಿಯಲ್ ಎಸ್ಟೇಟ್ ಮಾಫಿಯಾಗೆ ಅನುಕೂಲ ಮಾಡಿಕೊಡಲು , ಈ ಪ್ರದೇಶದಲ್ಲಿ ಐಟಿ ಪಾರ್ಕ್‌ಗೆ ಅನುಮತಿ ನೀಡಲಾಗಿದೆ. ಕರ್ನಾಟಕದಲ್ಲೂ ಇದೇ ರೀತಿ ಪರಿಸರ ಹಾಳುಮಾಡುವ ಪ್ರಯತ್ನ ನಡೆದಿದೆ. ಸದ್ಯ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿ ನೀಡಲು ಉದ್ದೇಶಿಸಲಾಗಿದೆ. ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದರು.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…