ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ ನೀರು ಹರಿಸಬೇಕೆಂದು ರೈತ ಸಂಘ ಒತ್ತಾಯಿಸಿದೆ. ಈ ಸಂಬಂಧ ತುಂಗಭದ್ರ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ಸರ್ಕಾರಕ್ಕೆ, ಶಾಸಕರಿಗೆ, ಸಚಿವರಿಗೆ ಪತ್ರ ಬರೆದು ರೈತರು ಕಷ್ಟಪಟ್ಟು ಬೆಳೆದಿರುವ ಬೆಳೆ ಉಳಿಸಿಕೊಳ್ಳಲು ಏಪ್ರಿಲ್ 10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel