ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್:-https://dom.karnataka.gov.in/udupi/public- ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸ ಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel