2022-23ನೇ ಸಾಲಿನ ವಿವಿಧ ಸ್ನಾತಕೋತ್ತರ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Advertisement
Advertisement

ಮಂಗಳೂರು ವಿಶ್ವವಿದ್ಯಾನಿಲಯವು 2022-23ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

Advertisement

ಮಂಗಳ ಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಂಗಣ, ಮಂಗಳೂರಿನಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು, ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಕುಶಾಲನಗರದ ಚಿಕ್ಕ ಅಳುವಾರದಲ್ಲಿರುವ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜುಗಳಲ್ಲಿ ಈ ಕೋರ್ಸ್‌ಗಳು ಲಭ್ಯ. ಪ್ರವೇಶಾತಿಯನ್ನು ಯುಯುಸಿಎಂಎಸ್‌ ಪೋರ್ಟಲ್‌ ಮೂಲಕ ನಡೆಸಲಾಗುವುದು.ಈ ಬಗ್ಗೆ ಹೆಚ್ಚಿನ ಮಾಹಿತಿಯು https://mangaloreuniversity.ac.in/  ಕೊಂಡಿಯಲ್ಲಿ ಲಭ್ಯ.

Advertisement
Advertisement

ಹೊರರಾಜ್ಯದ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. 2022ರ ನ. 03 ಅರ್ಜಿ ಸಲ್ಲಿಸಲು ಕೊನೆಯ ದಿ. ಮಾಹಿತಿಗೆ ಮಂಗಳೂರು ವಿಶ್ವವಿದ್ಯಾಲಯದ ವೆಬ್‌ಸೈಟ್‌ (www.mangaloreuniversity.ac.in) ನೋಡಬಹುದು. ಸಂಬಂಧಪಟ್ಟ ವಿಭಾಗಗಳ ಮುಖ್ಯಸ್ಥರನ್ನು ಅಥವಾ ಕೋರ್ಸ್‌ಗಳ ಸಂಯೋಜಕರನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "2022-23ನೇ ಸಾಲಿನ ವಿವಿಧ ಸ್ನಾತಕೋತ್ತರ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ"

Leave a comment

Your email address will not be published.


*