ಅರ್ಜಿ ಸಲ್ಲಿಸಿ | ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ |

December 17, 2022
11:30 AM

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.ಇದರ ಭಾಗವಾಗಿ ಕೇಂದ್ರ ಸರ್ಕಾರ ಮಹತ್ತರವಾದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನ ಜಾರಿಗೆ ತಂದಿದೆ.ಈ ಯೋಜನೆಯಡಿ, ಅರ್ಹ ಮಹಿಳೆಯರಿಗೆ ಸರ್ಕಾರವು ಉಚಿತ ಹೊಲಿಗೆ ಯಂತ್ರಗಳನ್ನ ನೀಡುತ್ತದೆ. ಇದು ಸಂಪೂರ್ಣವಾಗಿ ಉಚಿತವಾಗಿದೆ.

ಅರ್ಹ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಅದರಂತೆ, ಮಹಿಳೆಯರು ತಮ್ಮ ಅರ್ಹತೆಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದರೆ, ಸರ್ಕಾರ ಅವರಿಗೆ ಹೊಲಿಗೆ ಯಂತ್ರಗಳನ್ನ ನೀಡುತ್ತದೆ.

ಆಸಕ್ತರು  ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಮೊದಲು ಅಧಿಕೃತ ವೆಬ್ಸೈಟ್ https://www.india.gov.in  ಗೆ ಹೋಗಿ.
ಅಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಂಬಂಧಿಸಿದ ಅಪ್ಲಿಕೇಶನ್ ಇರುತ್ತದೆ.. ಫಾರ್ಮ್ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ. ಭರ್ತಿ ಮಾಡಿದ ನಮೂನೆಯೊಂದಿಗೆ ಅಗತ್ಯ ಪ್ರಮಾಣಪತ್ರಗಳನ್ನ ಲಗತ್ತಿಸಬೇಕು. ನಮೂನೆ ಮತ್ತು ಪ್ರಮಾಣಪತ್ರಗಳನ್ನು ಲಗತ್ತಿಸಿ ಮತ್ತು ಸಂಬಂಧಪಟ್ಟ ಕಚೇರಿಯಲ್ಲಿ ಸಲ್ಲಿಸಿ. ಈ ಅರ್ಜಿಯನ್ನು ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದರೆ, ನಿಮಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುತ್ತದೆ.

ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾದ ಅರ್ಹತೆ:

  •  20 ರಿಂದ 40 ವರ್ಷ ವಯಸ್ಸಿನ ಮಹಿಳೆಯರು
  •  ಕಾರ್ಮಿಕರು, ಕುಟುಂಬದ ಆದಾಯ 12 ಸಾವಿರ ರೂಪಾಯಿಗಿಂತ ಹೆಚ್ಚಿರಬಾರದು.
  •  ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಮಹಿಳೆಯರು ಈ ಯೋಜನೆಗೆ ಅರ್ಹರು.
  •  ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಈ ಯೋಜನೆಗೆ ಅರ್ಹರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror