Advertisement
MIRROR FOCUS

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಅವಕಾಶ

Share

ಪ್ರಸ್ತುತ 2024-25 ನೇ ಸಾಲಿನಿಂದ ಸ್ಕ್ಯಾನ್ ಪ್ರತಿ, ಮರು ಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಕರ್ನಾಟಕ ವನ್ ಮೊಬೈಲ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ ಪ್ರತಿಗಳನ್ನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ 7 ರ ವರೆಗೆ ಅವಕಾಶವಿದೆ. ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯ ಇಲ್ಲದವರು ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿ ಶುಲ್ಕ ಪಾವತಿಸಲು ಇದೇ 8 ರ ವರೆಗೆ ಕಾಲವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಇದೇ 4 ರಿಂದ 11 ರವರೆಗೆ ಅವಕಾಶ ಇದೆ.  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೂ ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳು ಇನ್ನು ಎರಡು ಬಾರಿ ಪರೀಕ್ಷೆ ಬರೆಯಬಹುದಾಗಿದೆ. ಎಸ್.ಎಸ್.ಎಲ್.ಸಿ. 2025 ರ ಪರೀಕ್ಷೆ -2 ಅನ್ನು ಇದೇ 26  ರಿಂದ ಜೂನ್ 2 ವರೆಗೆ ಹಾಗೂ ಪರೀಕ್ಷೆ 3 ಜೂನ್ 23 ರಿಂದ 30 ರವರೆಗೆ ನಡೆಸಲಾಗುವುದು. ಪರೀಕ್ಷೆ -2  ಕ್ಕೆ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ನಾಳೆಯಿಂದ ಇದೇ ಹತ್ತರ ವರೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

15 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago